14
May, 2026

A News 365Times Venture

14
Thursday
May, 2026

A News 365Times Venture

ಸಿಎಂ ಆದ ಬೆನ್ನಲ್ಲೇ ವಿಜಯ್ ಖಡಕ್ ನಿರ್ಧಾರ: 717 ಮದ್ಯದಂಗಡಿಗಳ ಮುಚ್ಚಲು ಆದೇಶ

Date:

ಚೆನ್ನೈ,ಮೇ,12,2026 (www.justkannada.in): ತಮಿಳುನಾಡು ಮುಖ್ಯಮಂತ್ರಿಯಾಗಿ   ನಟ ರಾಜಕೀಯ ನಾಯಕ ದಳಪತಿ ವಿಜಯ್​ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಖಡಕ್ ನಿರ್ಧಾರವೊಂದನ್ನ ತೆಗೆದುಕೊಂಡಿದ್ದು  ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ಬಳಿ ಇರುವ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗಿನ 717 ಸರ್ಕಾರಿ ಸ್ವಾಮ್ಯದ (TASMAC) ಮದ್ಯದ ಚಿಲ್ಲರೆ ಮಾರಾಟ ಮಳಿಗೆಗಳನ್ನು ಎರಡು ವಾರಗಳಲ್ಲಿ ಮುಚ್ಚುವಂತೆ  ತಮಿಳುನಾಡು ಸಿಎಂ ವಿಜಯ್ ಆದೇಶ  ಹೊರಡಿಸಿದ್ದಾರೆ ಎನ್ನಲಾಗಿದೆ.

ರಾಜ್ಯಾದ್ಯಂತ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮಾದಕ ದ್ರವ್ಯಗಳ ಹಾವಳಿಯನ್ನು ತಡೆಗಟ್ಟುವ ಸಲುವಾಗಿ “ಸಿಂಗ ಪೆಣ್ ಸಿರಪ್ಪು ಮಾದಕ ದ್ರವ್ಯ ವಿರೋಧಿ ಪಡೆ” ಸ್ಥಾಪಿಸಲು ನಿರ್ಣಾಯಕ ನಿರ್ದೇಶನವನ್ನು ಮೇ 11 ರಂದು ಹೊರಡಿಸಿದ್ದರು. ಈ ಘಟಕವು ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ದೂರುಗಳ ಮೇಲೆ ತ್ವರಿತ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಸಿಎಂ ವಿಜಯ್ ತಿಳಿಸಿದ್ದಾರೆ.

Key words: Tamilnadu CM, Vijay Order, close, 717 liquor shops

The post ಸಿಎಂ ಆದ ಬೆನ್ನಲ್ಲೇ ವಿಜಯ್ ಖಡಕ್ ನಿರ್ಧಾರ: 717 ಮದ್ಯದಂಗಡಿಗಳ ಮುಚ್ಚಲು ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...