7
March, 2026

A News 365Times Venture

7
Saturday
March, 2026

A News 365Times Venture

ಸಿಎಂ ಜೊತೆ ಮಾತುಕತೆ ವಿಫಲ : ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್

Date:

ಬೆಂಗಳೂರು,ಆಗಸ್ಟ್,4,2025 (www.justkannada.in):  ಸಾರಿಗೆ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಇಂದು ಸಾರಿಗೆ ನೌಕರರ 38 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಸಿಬ್ಬಂದಿ ಮುಂದಾಗಿದ್ದರು.

ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿ ಮುಷ್ಕರ ಹಿಂಪಡೆಯಲು ಮನವಿ ಮಾಡಿದರು.  38 ತಿಂಗಳ ಅರಿಯರ್ಸ್ ನೀಡಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದು ಸಭೆಯಿಂದ ಸಾರಿಗೆ ಮುಖಂಡರು ಹೊರ ನಡೆದರು.

ಹೀಗಾಗಿ ನಾಳೆಯಿಂದ  ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ಕಾರ್ಮಿಕ ಮುಖಂಡ ಅನಂತ ಸುಬ್ಬುರಾವ್, ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಿಲ್ಲ. ವೇತನದ ಹೆಚ್ಚಳದ ಬಗ್ಗೆಯೂ ಭರವಸೆ ಕೊಟ್ಟಿಲ್ಲ. ಹೀಗಾಗಿ ನಾಳೆಯಿಂದ ಮುಷ್ಕರ ಇರುತ್ತದೆ ಎಂದಿದ್ದಾರೆ.

Key words: CM, Meeting, Transport staff, indefinite, strike, tomorrow

The post ಸಿಎಂ ಜೊತೆ ಮಾತುಕತೆ ವಿಫಲ : ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...

ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಸಮತೋಲಿತ ಬಜೆಟ್: MLC  ಕೆ.ಶಿವಕುಮಾರ್

ಮೈಸೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿ 17ನೇ ಬಜೆಟ್...

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ ಪರೀಕ್ಷಾ...