7
March, 2026

A News 365Times Venture

7
Saturday
March, 2026

A News 365Times Venture

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

Date:

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಕಾಂಗ್ರೆಸ್ ಸರಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ.

ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. ಇದಕ್ಕೆ ತಕ್ಕಂತೆ ಬಂಡವಾಳ ವೆಚ್ಚವನ್ನೂ ಅವರು ಘೋಷಿಸಿದ್ದಾರೆ. ಇವೆಲ್ಲವೂ ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನು ತಂದುಕೊಡಲಿದ್ದು, ಅಪಾರ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಸೃಷ್ಟಿಸಲಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ ಸಾಕಷ್ಟು ಆದ್ಯತೆ ನೀಡಿದೆ. ಇದು ಸುಸ್ಥಿರ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಎಂ.ಬಿ  ಪಾಟೀಲ್ ನುಡಿದಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಭೂಸ್ವಾಧೀನಕ್ಕೆ ಮುಖ್ಯಮಂತ್ರಿಗಳು ಪ್ರತಿ ಎಕರೆ ಖುಷ್ಕಿ ಜಮೀನಿಗೆ 30 ಲಕ್ಷ ರೂ‌ ಮತ್ತು ತರಿ ಜಮೀನಿಗೆ 40 ಲಕ್ಷ ರೂ.  ನಿಗದಿ ಪಡಿಸಿರುವುದು ರೈತರಿಗೆ ಸಂದ ಜಯವಾಗಿದೆ. ಹಾಗೆಯೇ ವಿಜಯಪುರ ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯತ್ತ ಒಂದು ಹೆಜ್ಜೆ ಮುಂದಿಟ್ಟಿರುವುದು ಸ್ವಾಗತಾರ್ಹವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಜಿಟಿಟಿಸಿ ಕೇಂದ್ರಗಳ ಮತ್ತು ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ ಕೈಗಾರಿಕಾ ಬೆಳವಣಿಗೆಗೆ ಪೂರಕವಾಗಿದೆ. ಇದರಿಂದ ಗುಣಮಟ್ಟದ ಮಾನವ ಸಂಪನ್ಮೂಲ ಸೃಷ್ಟಿ ಸಾಧ್ಯವಾಗಲಿದೆ ಎಂದು ಎಂ.ಬಿ ಪಾಟೀಲ್ ಭರವಸೆ ವ್ಯಕ್ತಪಡಿಸಿದ್ದಾರೆ.

Key words: CM, Siddaramaiah, budget, Minister, M. B. Patil

The post ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...

ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಸಮತೋಲಿತ ಬಜೆಟ್: MLC  ಕೆ.ಶಿವಕುಮಾರ್

ಮೈಸೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿ 17ನೇ ಬಜೆಟ್...