ಶಿವಮೊಗ್ಗ,ಮೇ.27,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ. ನಾಳೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಹೋಗುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸಿಎಂ ಬದಲಾವಣೆ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ನಾಳೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ಬೆಂಗಳೂರಿಗೆ ಹೋಗುವೆ. ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗಿಯಾಗುವೆ ಎಂದರು.
ಶಿವಮೊಗ್ಗದಲ್ಲಿ ಸಿಎಂ ಕಾರ್ಯಕ್ರಮ ನಿಗದಿಯಾಗಿತ್ತು. ಈ ಬೆಳವಣಿಗೆ ಹಿನ್ನೆಲೆ ಸಿಎಂ ಕಾರ್ಯಕ್ರಮ ಬದಲಾವಣೆಯಾಗಬಹುದು ಎಲ್ಲಾ ಬೆಳವಣಿಗೆ ನೋಡಿಕೊಂಡು ಕಾರ್ಯಕ್ರಮ ನಿರ್ಧಾರ ಮಾಡುತ್ತೇವೆ ಎಂದು ಮಧು ಬಂಗಾರಪ್ಪ ತಿಳಿಸಿದರು.
Key words: CM change, breakfast, meeting, tomorrow, Minister, Madhu Bangarappa
The post ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ: ನಾಳೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಹೋಗುವೆ-ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




