13
June, 2026

A News 365Times Venture

13
Saturday
June, 2026

A News 365Times Venture

ಸಿಎಂ ರಾಜೀನಾಮೆ ಹಿನ್ನೆಲೆ: ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ

Date:

ಬೆಂಗಳೂರು,ಮೇ,29,2026 (www.justkannada.in):  ರಾಜ್ಯ ರಾಜಕೀಯದಲ್ಲಿ ನಡೆದ ಧಿಡೀರ್ ಬೆಳವಣಿಗೆಯಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ ಮಾಡಲಾಗಿದೆ.

ಸಿದ್ದರಾಮಯ್ಯ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ನೂತನ ಸಿಎಂ ಆಯ್ಕೆ ಮಾಡಲು  ನಾಳೆ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕಾಂಗ ಸಭೆಯನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕಾಂಗ್ರೆಸ್‌ನ ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡುವ ಪ್ರಕ್ರಿಯೆ  ನಡೆಯಲಿದೆ.

ಈ ಸಭೆಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಕೆಪಿಸಿಸಿ ಕಚೇರಿಯಿಂದಲೇ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರಿಗೂ ಅಧಿಕೃತವಾಗಿ ತುರ್ತು ಮಾಹಿತಿ ಮತ್ತು ಆಹ್ವಾನವನ್ನು ರವಾನಿಸಲಾಗಿದೆ. ಯಾವುದೇ ಶಾಸಕರು ಗೈರಾಗದಂತೆ ಶಿಸ್ತುಬದ್ಧವಾಗಿ ಸಭೆ ನಡೆಸಲು ಪಕ್ಷದ ನಾಯಕತ್ವ ಮುಂದಾಗಿದೆ.

Key words: CM, resignation, Congress party, legislative meeting, scheduled , tomorrow

The post ಸಿಎಂ ರಾಜೀನಾಮೆ ಹಿನ್ನೆಲೆ: ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಿಗದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ...

ತಮಿಳುನಾಡು ಸಿಎಂ ವಿಜಯ್ ವಿರುದ್ದ ಪ್ರತಿಭಟನೆಗೆ ನಿರ್ಧರಿಸಿದ್ದ ಕರವೇ ಕಾರ್ಯಕರ್ತರು ವಶಕ್ಕೆ

ಮಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್...

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...