ದಾವಣಗೆರೆ,ಜೂನ್,16,2025 (www.justkannada.in): ಸಿಎಂ ಸಿದ್ದರಾಮಯ್ಯ ಇಂದು ದಾವಣಗೆರೆಗೆ ಪ್ರವಾಸ ಕೈಗೊಂಡಿದ್ದರು. ಈ ವೇಳೆ ರೈತರು ಸಿಎಂ ಸಿದ್ದರಾಮಯ್ಯ ಅವರ ಕಾರನ್ನ ತಡೆದು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹೌದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಪೊಲೀಸರು ಅವಕಾಶ ನೀಡದೇ ಇರುವುದರಿಂದ ಕೋಪಗೊಂಡ ರೈತರು, ಸಿಎಂ ಸಿದ್ದರಾಮಯ್ಯ ಕಾರು ತಡೆದು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ ಹೊರವಲಯದ ಸರ್ಕ್ಯೂಟ್ ಹೌಸ್ ಆವರರಣದಲ್ಲಿ ನಡೆಯಿತು.
ವಿವಿಧ ಬೇಡಿಕೆಗಳನ್ನು ಮುಖ್ಯ ಮಂತ್ರಿಯವರ ಬಳಿ ಹೇಳಿಕೊಳ್ಳಲು ಆಗಮಿಸಿದ್ದ ರೈತರಿಗೆ ಪೋಲೀಸರು ಅವಕಾಶ ಮಾಡಿಕೊಡಲಿಲ್ಲ. ಪೊಲೀಸರ ವರ್ತನೆಯಿಂದ ಅಸಮಾಧಾನಗೊಂಡ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ತಡೆದು, ಕಾರಿನ ಮುಂದೆ ಮಲಗಿದರು.
ಮುಖ್ಯಮಂತ್ರಿಯ ಕಾರು ಚಾಲನೆ ಮಾಡುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ರೈತರ ಮನವೊಲಿಸಲು ಪ್ರಯತ್ನಿಸಿದರು. ಬಳಿಕ ಮುಖ್ಯಮಂತ್ರಿಯವರು ಕಾರಿನಲ್ಲಿ ಕುಳಿತೇ ರೈತರ ಬೇಡಿಕೆ ಆಲಿಸಿ, ಮನವಿ ಸ್ವೀಕರಿಸಿದರು.
Key words: CM, Siddaramaiah, car, stop, farmers
The post ಸಿಎಂ ಸಿದ್ದರಾಮಯ್ಯ ಕಾರು ತಡೆದು ರೈತರಿಂದ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.