ಬೆಂಗಳೂರು,ಮೇ,27,2026 (www.justkannada.in): ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿಎಂ ಬದಲಾವಣೆಗೆ ನಿರ್ಧರಿಸಿದ್ದು ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗರಂ ಆಗಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ನಾಯಕತ್ವ ವಿಚಾರವಾಗಿ ಯಾವುದೇ ಮಾತುಕತೆ ಆಗಿಲ್ಲ. ಈ ವಿಚಾರವಾಗಿ ಕೆ.ಸಿ ವೇಣುಗೋಪಾಲ್ ಹೇಳಿದ್ದೇ ಅಂತಿಮ . ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನ್ನೋದೆಲ್ಲಾ ಊಹಾಪೋಹ ಎಂದು ಸ್ಪಷ್ಟಪಡಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಉದ್ಬವಿಸಲ್ಲ. ನಿನ್ನೆ ರಾಜ್ಯಸಭೆ ಎಂಎಲ್ ಸಿ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ. ಬೇರೆಯದೆಲ್ಲಾ ಊಹಾಪೋಹ ಎಂದಿದ್ದಾರೆ ಎಂದು ಸಚಿವ ಎಂ. ಬಿ ಪಾಟೀಲ್ ತಿಳಿಸಿದರು.
Key words: CM Siddaramaiah, resignation, speculation, Minister , M.B. Patil
The post ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನ್ನೋದೆಲ್ಲಾ ಊಹಾಪೋಹ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




