ಮೈಸೂರು,ಜುಲೈ,1,2025 (www.justkannada.in): ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ. ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಂಡು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಎಂ.ಜಿ ಮಹೇಶ್, ಸಿದ್ದರಾಮಯ್ಯ ರಾಜಕೀಯ ಲಾಭಕ್ಕಾಗಿ ಹಿಂದುಳಿದ ವರ್ಗಗಳನ್ನು ಬಳಸಿಕೊಂಡಿದ್ದಾರೆ. ಮಾತೆತ್ತಿದರೆ ಅಕ್ಕಿ ಕೊಟ್ಟೇ ಎಂದು ಹೇಳುತ್ತಾರೆ. ಆದರೆ ದೇವರಾಜ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟರು. ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಸಿದರು. ದೇವರಾಜ ಅರಸು ಅವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು. ಸಿಎಂ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಹಿಂದುಳಿದ ವರ್ಗಗಳ ಜನರಿಗೆ ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರನ್ನು ಜನರು ಧಿಕ್ಕರಿಸಬೇಕು ಎಂದು ಕರೆ ನೀಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್ ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಮೂರು ಮೂರು ಬಾರಿ ಆರ್ ಎಸ್ ಎಸ್ ಬ್ಯಾನ್ ಮಾಡಿತ್ತು. ಇದೀಗ ಮತ್ತೆ ಆರ್ ಎಸ್ ಎಸ್ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಎಂ.ಜಿ ಮಹೇಶ್ ಹೇಳಿದರು.
Key words: CM Siddaramaiah, backward classes, State, BJP spokesperson, M.G. Mahesh
The post ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ- ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.