ಮೈಸೂರು,ಜುಲೈ,21,2025 (www.justkannada.in): ಸಿಎಂ ಸಿದ್ಧರಾಮಯ್ಯನವರ ವಿಷಯದಲ್ಲಿ ED ಸಂಸ್ಥೆ ರಾಜಕೀಯ ಮಾಡಿದೆ ಎಂದು ಸಾಬೀತಾಗಿದೆ ಎಂದು ಸಂಸದ ಸುನಿಲ್ ಬೋಸ್ ಟೀಕಿಸಿದರು.
ಈ ಕುರಿತು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಸಂಸದ ಸುನೀಲ್ ಬೋಸ್, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ED ತನಿಖಾ ಸಂಸ್ಥೆಯು ರಾಜಕೀಯ ಮಾಡುತ್ತಿದ್ದು ಇದು ಸರಿಯಲ್ಲ ಎಂಬುದಾಗಿ ಸುಪ್ರೀಂ ಅಭಿಪ್ರಾಯ ಪಟ್ಟಿದೆ. ED ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳ ಆಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ.
ದೇಶವೊಂದರ ಪ್ರಮುಖ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯು ದೇಶಾದ್ಯಂತ ಚುನಾವಣಾ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಕೆಲಸ ರಾಜಕೀಯ ಮಾಡಬೇಕಾದ ಜಾಗದಲ್ಲಿ ವಿಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ ವಿಷಯವಾಗಿದ್ದು ಸುಪ್ರೀಂ ಕೋರ್ಟ್ ನ ಈ ಎಚ್ಚರಿಕೆಯು, ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯವಾಗಿ ನೀಡಬೇಕಿದ್ದ ಎಚ್ಚರಿಕೆ ಆಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟ ಗೊಳಿಸುವ ಬಿಜೆಪಿಗರ ಹೀನಾಯ ಪ್ರಯತ್ನಗಳು ಇಲ್ಲಿಗೆ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ಇವರಿಗೆ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ಸಂಸದ ಸುನೀಲ್ ಬೋಸ್ ಎಚ್ಚರಿಸಿದ್ದಾರೆ.
Key words: ED , proves, politics , CM Siddaramaiah, case, MP, Sunil Bose
The post ಸಿಎಂ ಸಿದ್ಧರಾಮಯ್ಯ ವಿಷಯದಲ್ಲಿ ED ರಾಜಕೀಯ ಸಾಬೀತು : ಸಂಸದ ಸುನಿಲ್ ಬೋಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.