ಬೆಂಗಳೂರು,ಫೆಬ್ರವರಿ,3,2026 (www.justkannada.in): ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಐಟಿ ಇಲಾಖೆ ನಿರ್ಮಲಾ ಸೀತಾರಾಮನ್ ಗೆ ಬರುತ್ತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡುತ್ತಾರಾ ನೋಡೋಣ. ಎಸ್ ಐಟಿ ತನಿಖೆ ವರದಿ ನೋಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಕುರಿತು ಎಸ್ ಐಟಿ ತನಿಖೆ ಶುರು ಮಾಡಿದ್ದಾರೆ. ಕುಟುಂಬ ಬೇರೆಯವರ ಹೇಳಿಕೆ ದಾಖಲಿಸಿದ್ದಾರೆ. ತನಿಖೆ ಸಂಪೂರ್ಣ ಆದ ಮೇಲೆ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯಲಿದೆ ಎಂದು ಪರಮೇಶ್ವರ್ ತಿಳಿಸಿದರು.
Key words: CJ Roy, suicide case, judicial inquiry, Home Minister, Parameshwar
The post ಸಿಜೆ ರಾಯ್ ಆತ್ಮಹತ್ಯೆ ಕೇಸ್: ನ್ಯಾಯಾಂಗ ತನಿಖೆಗೆ ಆದೇಶ ಮಾಡ್ತಾರಾ ನೋಡೋಣ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




