10
March, 2026

A News 365Times Venture

10
Tuesday
March, 2026

A News 365Times Venture

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಬೆಂಗಳೂರು ನಗರದಲ್ಲಿ ಸಿಲಿಂಡರ್ ಸಮಸ್ಯೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಸಿಲಿಂಡರ್ ಸಮಸ್ಯೆ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ  ಸಿಎಂ ಸಿದ್ದರಾಮರಾಮಯ್ಯ ಪತ್ರ ಬರೆದಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಗೃಹಬಳಕೆಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಇತ್ತೀಚಿನ ಆದೇಶದ ನಂತರ, ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆಯಾಗಿರುವ ಬಗ್ಗೆ ನಾನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಇದರಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಸೇವೆ ಸಲ್ಲಿಸುವ ಹೋಟೆಲ್‌ ಗಳು, ಮೆಸ್‌ ಗಳು, ಹಾಸ್ಟೆಲ್‌ ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳಿಗೆ ಸಿಲಿಂಡರ್ ಪೂರೈಕೆಗೆ ಅಡ್ಡಿಯಾಗಿದೆ. ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಪುನಃಸ್ಥಾಪಿಸಲು ನಾನು ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದೇನೆ” ಎಂದು ತಿಳಿಸಿದ್ದಾರೆ.

Key words: Disruption, cylinder, supply, CM Siddaramaiah,letter, Union Minister

 

The post ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...