4
March, 2026

A News 365Times Venture

4
Wednesday
March, 2026

A News 365Times Venture

ಸುಪ್ರೀಂ ಆದೇಶ ಕೇಂದ್ರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,21,2025 (www.justkannada.in): ಮುಡಾ ಹಗರಣ ಸಂಬಂಧ ಇಡಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿ ಇಡಿಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾದ ಗೌರವಾನ್ವಿತ ಗವಾಯಿ ಅವರು ಹೇಳಿದ್ದಾರೆ. ‘’ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು  ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ.

ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.vtu

Key words: CM Siddaramaiah, Supreme court, Central government

The post ಸುಪ್ರೀಂ ಆದೇಶ ಕೇಂದ್ರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...