28
April, 2026

A News 365Times Venture

28
Tuesday
April, 2026

A News 365Times Venture

ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

Date:

ಬೆಂಗಳೂರು,ಫೆಬ್ರವರಿ,25,2026 (www.justkannada.in): ಖಾಲಿ ಹುದ್ದೆಗಳ ಭರ್ತಿಗೆ ಕೂಡಲೇ ನೇಮಕಾತಿ ಆರಂಭಕ್ಕೆ ಆಗ್ರಹಿಸಿ ನಿನ್ನೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಹೋರಾಟ ನಡೆಸಿದ ಬೆನ್ನಲ್ಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಈ ಕುರಿತು ಮಾತಾನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಯಾವುದೇ ಹಗರಣವಾಗದ ರೀತಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು  ಆಗಿಲ್ಲ. ಆ ಅವಧಿಯಲ್ಲಿ ಹಲವು ಹಗರಣಗಳು ನಡೆದವು. ಒಳಮೀಸಲಾತಿ ವಿಚಾರದಲ್ಲಿ ಕೆಲವು ಅಡಚಣೆಗಳು ಎದುರಾಗುತ್ತಿವೆ. ನಿರುದ್ಯೋಗಿ ಯುವಕರಿಗೆ ನೆರವಾಗುವ ಉದ್ದೇಶದಿಂದಲೇ ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುತ್ತೇವೆ ಎಂದರು.

ಕೆಪಿಎಸ್‌ಸಿ ಸೇರಿದಂತೆ ವಿವಿಧ ನೇಮಕಾತಿ ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ಶಿಕ್ಷಕರ ಹಾಗೂ ಆರೋಗ್ಯ ಇಲಾಖೆಯ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿದಿದೆ ಎಂದು  ಡಿಕೆ ಶಿವಕುಮಾರ್ ತಿಳಿಸಿದರು.

Key words: Action, fill, vacant, posts, DCM, DK Shivakumar

The post ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಕ್ಕಳ ಜೊತೆ ಫುಟ್ಬಾಲ್ ಆಡಿ ಸಂಭ್ರಮಿಸಿದ ಪ್ರಧಾನಿ ಮೋದಿ

ಗ್ಯಾಂಗ್ಟಕ್ ,ಏಪ್ರಿಲ್,28,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ...

ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ- ಸಚಿವ ಶಿವರಾಜ್ ತಂಗಡಗಿ ಸೂಚನೆ

ಕೊಪ್ಪಳ,ಏಪ್ರಿಲ್,28,2026 (www.justkannada.in):  ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು...

ಮೈಸೂರು: ಜೆಎಸ್ಎಸ್ ಕಾರ್ಪೊರೇಟ್ ಲಾ ಮೂಟ್ ಕೋರ್ಟ್ ಸ್ಪರ್ಧೆ ಯಶಸ್ವಿ

ಮೈಸೂರು,ಏಪ್ರಿಲ್,27,2026 (www.justkannada.in): ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನದಲ್ಲಿರುವ ಮೈಸೂರು ಕುವೆಂಪುನಗರದ ಜೆಎಸ್ಎಸ್ ಕಾನೂನು...

ಸಚಿವ ಸುಧಾಕರ್ ಗೆ ಏನಾಗಿದೆ? ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ಬಹಿರಂಗಪಡಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಏಪ್ರಿಲ್,27,2026 (www.justkannada.in): ಸಚಿವ ಡಿ.ಸುಧಾಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...