ಚೆನ್ನೈ, ಆಗಸ್ಟ್, 18,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣ ಸಂಬಂಧ ತಮಿಳುನಾಡು ಸರ್ಕಾರ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಪರಿಹಾರ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲಿನ ವಿಧಾನ ಸಭೆ ಕಲಾಪದಲ್ಲೂ ಹನೂರು ಶೂಟೌಟ್ ವಿಚಾರ ಪ್ರಸ್ತಾಪವಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ರಂಜಿತ್ ಕುಮಾರ್ ಘೋಷಿಸಿದ್ದಾರೆ ಎನ್ನಲಾಗಿದೆ.
ಹನೂರಿನಲ್ಲಿ ನಡೆದಿರುವ ಈ ಘಟನೆ ಬಗ್ಗೆ ತಮಿಳುನಾಡು ವಿಧಾನ ಸಭೆಯಲ್ಲಿ ಭಾರಿ ಚರ್ಚೆಯಾಗಿದ್ದು, ಮೃತರೆಲ್ಲರೂ ತಮಿಳುನಾಡು ಮೂಲದವರು. ಮೆಟ್ಟೂರು ಜಲಾಶಯ ನಿರ್ಮಾಣದಿಂದ ಹನೂರಿನಲ್ಲಿ ಅವರು ವಾಸವಿದ್ದಾರೆ, ಅವರೆಲ್ಲ ತಮಿಳರು, ಅವರ ರಕ್ಷಣೆಯಾಗಬೇಕು ಎಂಬ ಚರ್ಚೆಗಳು ನಡೆದಿವೆ. ಸದನದಲ್ಲಿ ವ್ಯಕ್ತವಾಗಿವೆ. ಅರಣ್ಯಾಧಿಕಾರಿಗಳು ಬಿಡುಗಡೆ ಮಾಡಿದ ಫೋಟೋಗಳಲ್ಲಿ ಸ್ಟಿಕ್ಕರ್ ತೆಗೆಯದ ಹೊಸ ಚಪ್ಪಲಿ ಇರುವ ಬಗ್ಗೆಯೂ ಚರ್ಚೆಯಾಗಿದೆ. ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಯಾಗಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ ಎನ್ನಲಾಗಿದೆ.
Key words: Three Death, Hanur shootout, case, Tamil Nadu government, announces, compensation
The post ಹನೂರು ಶೂಟೌಟ್ ಗೆ ಮೂವರು ಬಲಿ ಕೇಸ್: ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




