18
April, 2025

A News 365Times Venture

18
Friday
April, 2025

A News 365Times Venture

ಹಾಡಿಗಳಿಗೆ ವಿದ್ಯುತ್‌ ಪೂರೈಕೆಗೆ ತುರ್ತು ಕ್ರಮ ವಹಿಸಿ; ಅಧಿಕಾರಿಗಳಿಗೆ ತಾಕೀತು ಮಾಡಿದ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ್ ರಾಜು.

Date:

 

ಮೈಸೂರು, ಏ.09,2025:  ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಿ ಕೆಲಸ ಮುಂದುವರಿಸುವಂತೆ ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅಧ್ಯಕ್ಷತೆಯಲ್ಲಿ ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದೆ. ಯಾವುದೇ ಸಮಸ್ಯೆ ಆದಲ್ಲಿ ನಿಗಮದ ಅಧ್ಯಕ್ಷರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೆ ಅದನ್ನು ಸರಿಪಡಿಸುತ್ತಾರೆ. ಹೀಗಾಗಿ ಯೋಜನೆಗೆ ಸಂಬಂಧಿಸಿದಂತೆ ಕೆಲಸ ಮುಂದುವರಿಸಿ” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಗ್ರಾಹಕರು ಹಾಗೂ ರೈತರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಫೀಡರ್‌ ನಿರ್ವಹಣೆ ಅಭಿಯಾನ, ಟ್ರಾನ್ಸ್‌ಫಾರ್ಮರ್‌ ನಿರ್ವಹಣೆ ಅಭಿಯಾನವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಜೊತೆಗೆ ರೈತರಿಗೆ ಸಮರ್ಪಕ ವಿದ್ಯುತ್ ವ್ಯವಸ್ಥೆ ಹಾಗೂ ಪರಿವರ್ತಕಗಳನ್ನು ನೀಡಲು ಕ್ರಮವಹಿಸಲಾಗಿದೆ” ಎಂದು ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಸಭೆಯಲ್ಲಿ ತಿಳಿಸಿದರು.

key words: CESCOM, Managing Director, Munigopal Raju, Mysore.

CESCOM Managing Director Munigopal Raju has instructed officials to take urgent steps to supply electricity to the villages.

Munigopal Raju, Managing Director, CESCOM , Mysore.

 

 

The post ಹಾಡಿಗಳಿಗೆ ವಿದ್ಯುತ್‌ ಪೂರೈಕೆಗೆ ತುರ್ತು ಕ್ರಮ ವಹಿಸಿ; ಅಧಿಕಾರಿಗಳಿಗೆ ತಾಕೀತು ಮಾಡಿದ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ್ ರಾಜು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು,ಏಪ್ರಿಲ್,17,2025 (www.justkannada.in): ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಇಂದು...

ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ

ಮೈಸೂರು,ಏಪ್ರಿಲ್,17,2025 (www.justkannada.in):  ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ...

ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಮುಷ್ಕರ ವಾಪಸ್​

ಬೆಂಗಳೂರು, ಏಪ್ರಿಲ್​ 17,2025 (www.justkannada.in):  ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ...

ಜಾತಿ ಗಣತಿ: ಅಧಿಕಾರದ ನೆಲೆ ಕುಸಿಯುವ ಭೀತಿಯಲ್ಲಿ ಪ್ರಬಲ ಸಮುದಾಯಗಳು..

ಬೆಂಗಳೂರು,ಏಪ್ರಿಲ್,17,2025 (www.justkannada.in): 2019: ಲೋಕಸಭೆ ಚುನಾವಣೆ ಹೊತ್ತಿನೊಳಗೆ ಪ್ರಧಾನಿ ನರೇಂದ್ರ ಮೋದಿ...