11
March, 2026

A News 365Times Venture

11
Wednesday
March, 2026

A News 365Times Venture

ಹಾಡಿ ಪ್ರದೇಶಕ್ಕೆ ಜಿಪಂ ಸಿಇಓ  ಭೇಟಿ: ಅಹವಾಲು ಸ್ವೀಕಾರ

Date:

ಮೈಸೂರು, ಮಾರ್ಚ್,19,2025 (www.justkannada.in): ಜಿಲ್ಲಾ ಪಂಚಾಯಿತ್  ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್. ಯುಕೇಶ್ ಕುಮಾರ್ ಅವರು ಇಂದು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ಬಳಿ ಇಂದಿಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯ‌ನಿರ್ವಹಿಸದ ಬಗ್ಗೆ ಪ್ರಶ್ನಿಸಿದರು. ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೇಡಿಕೆ ಮತ್ತು ವಸೂಲಾತಿ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.

ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ 15ನೇ ಹಣಕಾಸು ಯೋಜನೆಯಡಿ ನಿರ್ಮಾಣಗೊಂಡಿರುವ ಶೌಚಾಲಯ ಕಾಮಗಾರಿ ಪರಿಶೀಲನೆ ಮಾಡಿದರು. ಜೊತೆಗೆ ಶಾಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿರುವುದರ ಕುರಿತು ಮಾಹಿತಿ ಪಡೆದರು.

ಬಳಿಕ ಕಿರಂಗೂರಿನ‌ ಶಂಕರಪುರ ಹಾಡಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಅಲ್ಲಿನ‌ ಸ್ಥಳೀಯರು ವಸತಿ ಕುರಿತು ಬೇಡಿಕೆ ಸಲ್ಲಿಸಿದ್ದು, ಒಂದೇ ಮನೆಯಲ್ಲಿ ಒಂದೆರಡು ಕುಟುಂಬಗಳು ಹೆಚ್ಚಾಗಿ ವಾಸವಿದ್ದು, ನಿವೇಶನ ವಂಚಿತರಾದವರಿಗೆ ಸೂಕ್ತ‌ ವಸತಿ ಕಲ್ಪಿಸುವಂತೆ‌ ಮನವಿ ಸಲ್ಲಿಸಿದರು.

ಬಳಿಕ ಉಮ್ಮತ್ತೂರು ಗ್ರಾಮ ಪಂಚಾಯಿತಿಯ ನಲ್ಲೂರು ಪಾಲ ಆಶ್ರಮ ಶಾಲೆ‌ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾಡಿದ್ದು, ಇಲ್ಲಿನ ಹಂಗಾಮಿ ಶಿಕ್ಷಕರಿಗೆ ನಿಗಧಿತ‌ ಸಮಯಕ್ಕೆ ವೇತನ ಪಾವತಿಯಾಗದಿರುವ ಕುರಿತ ಸಮಸ್ಯೆ ಆಲಿಸಿದರು. ಜೊತೆಗೆ ಶಾಲೆಗಳಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ಮತ್ತು ಹೊಸದಾಗಿ ಶಾಲಾ ಶೌಚಾಲಯವನ್ನು ಮ-ನರೇಗಾದಿಂದ  ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿಡಿಒ ಅವರಿಗೆ ತಾಕೀತು ಮಾಡಿದರು.

ಇದೇ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಎಇಇ ಪುಟ್ಟರಾಜು, ಪಿ.ಆರ್.ಇ.ಡಿ. ಅಭಿಯಂತರರು, ಸಿಡಿಪಿಒ ಅಧಿಕಾರಿ ಹರೀಶ್, ಪರಿಶಿಷ್ಟ ಪಂಗಡ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ತಾಲ್ಲೂಕು ಯೋಜನಾಧಿಕಾರಿ ಎಂ.ಎಸ್.ರಾಜೇಶ್, ನರೇಗಾ ಸಹಾಯಕ ನಿರ್ದೇಶಕರ ಎಸ್. ಗಿರಿಧರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವ. ಕೆ, ಟಿ.ಭವ್ಯ, ಮ-ನರೇಗಾ ಸಹಾಯಕ ಇಂಜಿನಿಯರ್ ನಂದ ಶ್ರೀನಿವಾಸ್, ಮದನ್, ಅನಿಲ್ ಸೇರಿದಂತೆ ಕಾರ್ಯದರ್ಶಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Key words: mysore, ZP, CEO, Visit, Hadi Area

The post ಹಾಡಿ ಪ್ರದೇಶಕ್ಕೆ ಜಿಪಂ ಸಿಇಓ  ಭೇಟಿ: ಅಹವಾಲು ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...