30
April, 2026

A News 365Times Venture

30
Thursday
April, 2026

A News 365Times Venture

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ:  ಬಸ್ ಕಂಡಕ್ಟರ್ ಸಾವು.

Date:

ಹಾಸನ,ಜೂನ್,28,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗತ್ತಲೇ ಇದ್ದು ಇಂದು ಬೆಳಿಗ್ಗೆ ಆಟೋ ಚಾಲಕರೊಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

41 ವರ್ಷದ ಬಸ್ ಕಂಡಕ್ಟರ್ ಗಿರೀಶ್  ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿಯ ಹ್ಯಾರಾನೆ ಗ್ರಾಮದ ಗಿರೀಶ್ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಮಧ್ಯೆ ಇಂದು ರಜೆ ಇದ್ದ ಕಾರಣ ಊರಿಗೆ ಬಂದಿದ್ದರು.

ಹೊಲದಲ್ಲಿ ಜೋಳ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಸ್ ಆಗಿದ್ದ ಗಿರೀಶ್, ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮೂಲಕ ಇಂದು ಒಂದೇ ದಿನ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ.  ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬೆಳಿಗ್ಗೆಯಷ್ಟೇ ಆಟೋ ಚಾಲಕ ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ್ದರು.vtu

Key words: Hassan, heart attack, Bus conductor, dies.

The post ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ:  ಬಸ್ ಕಂಡಕ್ಟರ್ ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...