15
September, 2026

A News 365Times Venture

15
Tuesday
September, 2026

A News 365Times Venture

ಹುಲಿ ದಾಳಿಗೆ ವ್ಯಕ್ತಿ ಬಲಿ: ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

Date:

ಚಾಮರಾಜನಗರ,ಸೆಪ್ಟಂಬರ್,15,2026 (www.justkannada.in):  ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸವಣ್ಣ (65) ಮೃತಪಟ್ಟವರು. ಎಂದಿನಂತೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಹುಲಿ ದಾಳಿ ನಡೆಸಿದ್ದು, ಬಸವಣ್ಣ ಅವರನ್ನು ಎಳೆದೊಯ್ದಿದೆ ಎನ್ನಲಾಗಿದೆ. ಹುಲಿ ಅವರ ದೇಹದ ಅರ್ಧ ಭಾಗವನ್ನು ತಿಂದು, ಬಳಿಕ ಸಮೀಪದಲ್ಲಿದ್ದ ಕಬ್ಬಿನ ತೋಟದೊಳಕ್ಕೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಸಂಜೆಯಾದರೂ ಬಸವಣ್ಣ ಅವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಜಮೀನಿಗೆ ತೆರಳಿ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು

ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ ಎಂದು ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದಿರುವುದು ತಿಳಿದ ಬಳಿಕವೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ, ಅವರ ಮೊಬೈಲ್ ಸ್ವಿಚ್‌ಆಫ್ ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹುಲಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಗಂಭೀರ ಘಟನೆ ನಡೆದಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಖಂಡನೀಯ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Key words: Man, Death, tiger attack, Villagers, outraged, forest officials

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಡಾ ದೂರು ಕೊಟ್ಟಿದ್ದು ಯಾರು?  ಕಾಂಗ್ರೆಸ್ ನವರೇ ಅಲ್ವಾ? ಮಾಜಿ ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು,ಸೆಪ್ಟಂಬರ್,15,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ...

ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in): “ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ...

ಸೆ.19ರಂದು ತೀರ್ಥಹಳ್ಳಿಗೆ ಸಿಎಂ : ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ,ಸೆಪ್ಟಂಬರ್,15,2026 (www.justkannada.in): ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ,...

ವಂದೇ ಮಾತರಂ ವಿವಾದ: ಸರ್ಕಾರದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್

ಬೆಂಗಳೂರು, ಸೆಪ್ಟೆಂಬರ್​​, 15,2026 (www.justkannada.in):  ವಂದೇ ಮಾತರಂ ಗೀತೆಯ ಚರಣ ಕಡಿತಗೊಳಿಸುವ...