2
August, 2025

A News 365Times Venture

2
Saturday
August, 2025

A News 365Times Venture

ಹೂಡಿಕೆದಾರರ ಸಮಾವೇಶ: ಒಡಂಬಡಿಕೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ ಎಂ.ಬಿ ಪಾಟೀಲ್ ಸೂಚನೆ

Date:

ಬೆಂಗಳೂರು,ಮಾರ್ಚ್,1,2025 (www.justkannada.in): ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಗುರುವ ಹೂಡಿಕೆ ಒಡಂಬಡಿಕೆಗಳ ಪರುಣಾಮಕಾರಿ ಅನುಷ್ಠಾನಕ್ಕೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟು ನಿರ್ದೇಶನ ನೀಡಿದ್ದಾರೆ.

ಈ ಸಂಬಂಧವಾಗಿ ಸಚಿವ ಎಂ.ಬಿ ಪಾಟೀಲ್ ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಐಎಡಿಬಿ, ಉದ್ಯೋಗ ಮಿತ್ರ, ಭುಸ್ವಾಧೀನ ವಿಭಾಗ ಮತ್ತು  ಇನ್ವೆಸ್ಟ್ ಕರ್ನಾಟಕ ಫೋರಂನ ಉನ್ನತ ಅಧಿಕಾರಿಗಳ ಜತೆ ಇಲ್ಲಿನ ಖನಿಜ ಭವನದಲ್ಲಿ ಮಹತ್ವದ ಸಭೆ ನಡೆಸಿದರು.

ಹೂಡಿಕೆದಾರರು ಭಾರೀ ನಿರೀಕ್ಷೆಯೊಂದಿಗೆ ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾರೆ. ಆದ್ದರಿಂದ ಅಧಿಕಾರಿಗಳು ಭೂಮಿಯ ಲಭ್ಯತೆ, ಸ್ವಾಧೀನ ಪ್ರಕ್ರಿಯೆ, ಇರಬಹುದಾದ ವಿವಾದಗಳ ಇತ್ಯರ್ಥ, ಈಗಾಗಲೇ ಸರಕಾರದ ಮಟ್ಟದಲ್ಲಿ ಇರುವ ಭೂಮಿ ಇವುಗಳ ಬಗ್ಗೆ ತಿಳಿವಳಿಕೆ ಹೊಂದಿರಬೇಕು ಎಂದು ಅವರು ಹೇಳಿದ್ದಾರೆ.

ಸುಗಮ ಹೂಡಿಕೆಗೆ ಕೈಗಾರಿಕಾ ಇಲಾಖೆಯು ಉದ್ಯಮಿಸ್ನೇಹಿ ಏಕಗವಾಕ್ಷಿ ವ್ಯವಸ್ಥೆಯನ್ನು ಕೂಡ ರೂಪಿಸಿದೆ. ಈ ಬಗ್ಗೆ ಕೂಡ ಸಂಬಂಧಿಸಿದ ಉಳಿದ ಇಲಾಖೆಗಳ ಅಧಿಕಾರಿಗಳಲ್ಲೂ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಕೈಗಾರಿಕಾ ಯೋಜನೆಗಳ ಜತೆ ಕಂದಾಯ, ಅರಣ್ಯ, ಇಂಧನ, ನಗರಾಭಿವೃದ್ಧಿ, ಮಾಲಿನ್ಯ ನಿಯಂತ್ರಣ ಮಂಡಲಿ, ಬಿಡಬ್ಲ್ಯುಎಸ್ಎಸ್ ಬಿ ಮುಂತಾದ ಇಲಾಖೆಗಳು ನಿಕಟ ಸಂಬಂಧ ಹೊಂದಿವೆ. ಈ ಇಲಾಖೆಗಳಿಂದ ಕೂಡ ಕೈಗಾರಿಕಾ ಯೋಜನೆಗಳಿಗೆ ಅನುಮತಿ ಅಗತ್ಯವಾಗಿದೆ. ಇವೆಲ್ಲವುಗಳ ಜೊತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಬೇಕು ಎಂದು ಎಂ.ಬಿ ಪಾಟೀಲ್ ಸಭೆಯಲ್ಲಿ ಗಮನ ಸೆಳೆದು ಮನದಟ್ಟು ಮಾಡಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಐಕೆಎಫ್ ಹೆಚ್ಚುವರಿ ನಿರ್ದೇಶಕ ಶಿವಕುಮಾರ, ಜಗದೀಶ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

Key words: Investors, Conference, Minister, M.B. Patil, speedy implementation, agreements

The post ಹೂಡಿಕೆದಾರರ ಸಮಾವೇಶ: ಒಡಂಬಡಿಕೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ ಎಂ.ಬಿ ಪಾಟೀಲ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇಸಾಯಿ ಆಯೋಗದಿಂದ ಕ್ಲೀನ್ ಚಿಟ್ : ಮುಡಾದಲ್ಲಿ ಹಗರಣವೇ ಆಗಿಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,1,2025 (www.justkannada.justkannada.in): ಮುಡಾ ಹಗರಣ ಪ್ರಕರಣದಲ್ಲಿ ನಿವೃತ್ತ ನ್ಯಾ.ದೇಸಾಯಿ ಆಯೋಗ ಕ್ಲೀನ್...

ಡ್ರಗ್ಸ್ ಪತ್ತೆ ವಿಚಾರ: ಇಂಟಲಿಜನ್ಸ್, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣ್ತಿದೆ – ಶಾಸಕ ತನ್ವೀರ್ ಸೇಠ್

ಮೈಸೂರು,ಆಗಸ್ಟ್, 1,2025 (www.justkannada.in): ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಇಂಟಲಿಜನ್ಸ್...

ಸತ್ತ ವ್ಯಕ್ತಿಯ ಹೆಸರಲ್ಲಿ ಜಿಪಿಎ, ಆಸ್ತಿ ಕಬಳಿಸಿ ಮಾರಾಟ: ಪ್ರಕರಣ ದಾಖಲು

ಮೈಸೂರು, ಆಗಸ್ಟ್,1,2025 (www.justkannada.in): ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ...

ಪ್ರಜ್ವಲ್ ರೇವಣ್ಣ ತಪ್ಪಿತಸ್ಥ: ಸಾಬೀತಿಗೆ ನೆರವಾದ 123 ಸಾಕ್ಷ್ಯಗಳು, 23 ಸಾಕ್ಷಿಗಳು ಹಾಗೂ 2000 ಪುಟಗಳ ಚಾರ್ಜ್‌ಶೀಟ್ .!

ಬೆಂಗಳೂರು, ಆ.೦೧,೨೦೨೫: ಮೈಸೂರು ಜಿಲ್ಲೆಯ  ಕೆ.ಆರ್. ನಗರದಲ್ಲಿ ಮನೆ ಕೆಲಸದಾಕೆ ದಾಖಲಿಸಿದ್ದ...