ಬೆಂಗಳೂರು,ಜೂನ್,13,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನ ಬಂಧಿಸಿದ ಪೊಲೀಸರು 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಚಿಕ್ಕಜಾಲ ಠಾಣಾ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ಸೆಸ್ ಎಂಬಾಕೆಯನ್ನ ಬಂಧಿಸಿದ್ದಾರೆ.
ಬಂಧಿತಳ ಬಳಿ ಇಂದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪೊಲೀಸರು ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Key words: Rs 10 crore ,worth, Drugs, seized, Foreign woman, arrested
The post 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಓರ್ವ ವಿದೇಶಿ ಮಹಿಳೆ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.