22
August, 2026

A News 365Times Venture

22
Saturday
August, 2026

A News 365Times Venture

15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ

Date:

ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಕುರಿತು ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಗಳು) ಪ್ರಕಟಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ ಪ್ರಕಟಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಒದಗಿಸಲಾಗಿದೆ. ಆದರೂ ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅನೇಕ ಅಭ್ಯರ್ಥಿಗಳಿಗೆ ಗೊಂದಲ ಇರುವುದನ್ನು ಗಮನಿಸಿ, ಅವರ ಅನುಕೂಲಕ್ಕಾಗಿ FAQ ಪ್ರಕಟಿಸಲಾಗಿದೆ. ಇದರಿಂದ ಬಹುತೇಕ ಅಭ್ಯರ್ಥಿಗಳ ಗೊಂದಲ ನಿವಾರಣೆಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವರು ಹೇಳಿದ್ದಾರೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಸಂಬಂಧಪಟ್ಟ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು, ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯವಿರುವ ಸರಿಯಾದ ದಾಖಲೆಗಳನ್ನು ಮಾತ್ರ ಒದಗಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

ಅಧಿಸೂಚನೆ ಹಾಗೂ FAQ ಓದಿದ ನಂತರವೂ ಯಾವುದೇ ಗೊಂದಲ ಅಥವಾ ಅನುಮಾನ ಬಗೆಹರಿಯದಿದ್ದಲ್ಲಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 080-22483145, 080-22483140 ಅಥವಾ ಮೊಬೈಲ್ ನಂಬರ್ 9449588020 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಪಾರದರ್ಶಕ ನೇಮಕಾತಿಗೆ ಕ್ರಮ

ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡುವುದು, ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಅವಕಾಶ ಕಲ್ಪಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಡುವುದು ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಯಾರಾದರೂ ಉದ್ಯೋಗ ಕೊಡಿಸುವುದಾಗಿ ಹಣ ಕೇಳಿದರೆ ಅಥವಾ ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶ ನೀಡುವುದಾಗಿ ಆಮಿಷವೊಡ್ಡಿದರೆ ಅಂತಹವರ ಕುರಿತು ಕೂಡಲೇ ಇಲಾಖೆಯ ಗಮನಕ್ಕೆ ತರಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ, ಅರ್ಹತೆ ಮತ್ತು ನಿಯಮಗಳ ಆಧಾರದ ಮೇಲೆ ಪಾರದರ್ಶಕವಾಗಿ ನೇಮಕಾತಿ ನಡೆಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: Recruitment, 15,000 teachers, FAQ, published, Minister, Madhu Bangarappa

The post 15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್  ಅನ್ನು HD ಕುಮಾರಸ್ವಾಮಿ ಮಾಡಿ ಈಗ ನಮ್ಮ ಮೇಲೆ ಹೇಳುತ್ತಿದ್ದಾರೆ-ಸಚಿವ ಹೆಚ್ ಸಿ ಬಾಲಕೃಷ್ಣ

ರಾಮನಗರ,ಆಗಸ್ಟ್,22,2026 (www.justkannada.in):   ಬಿಡದಿ ಟೌನ್ ಶಿಪ್  ಅನ್ನು ಹೆಚ್ ಡಿ ಕುಮಾರಸ್ವಾಮಿ...

ಭಾರತದ ಶಿಕ್ಷಣ ವ್ಯವಸ್ಥೆ ಈಗ RSS ಅಡ್ಡೆಯಾಗಿದೆ- ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ,ಆಗಸ್ಟ್,22,2026 (www.justkannada.in): ಭಾರತದ  ಶಿಕ್ಷಣ ವ್ಯವಸ್ಥೆ  ಈಗ ಆರ್ ಎಸ್ ಎಸ್...

ದಸರಾ ಗಜಪಯಣಕ್ಕೆ ದಿನಾಂಕ ನಿಗದಿ: ಆ. 26ರಂದು ಚಾಲನೆ

ಮೈಸೂರು,ಆಗಸ್ಟ್,22,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಪೂರ್ವಭಾವಿ ಕಾರ್ಯಕ್ರಮವಾದ...

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ

ಬೆಂಗಳೂರು, ಆಗಸ್ಟ್,21,2026 (www.justkannada.in): ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ...