ನವದೆಹಲಿ,ಜೂನ್,13,2025 (www.justkannada.in): ದೆಹಲಿಯಲ್ಲಿ ಇಂದು ನಡೆದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ರಾಜ್ಯದ ಪ್ರಸ್ತಾವನೆಯನ್ನ ಸಲ್ಲಿಕೆ ಮಾಡಿದರು.
ಇಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರ್ವಿಂದ್ ಪನಗಾರಿಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮತ್ತು ಹಣಕಾಸು ವರ್ಗಾವಣೆಗಳ ಕುರಿತು ರಾಜ್ಯದ ಆಶಯಗಳು, ನಿರೀಕ್ಷೆಗಳು ಮತ್ತು ಪ್ರಸ್ತಾವನೆಗಳನ್ನು ಮಂಡಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯ ಕಾರ್ಯದರ್ಶಿರವರು, ಮುಖ್ಯಮಂತ್ರಿ ಕಚೇರಿ ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾನ್ಯ ಮುಖ್ಯಮಂತ್ರಿಗಳು ಹೆಚ್ಚುವರಿ ಜ್ಞಾಪಕ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದರೊಂದಿಗೆ, ಈ ಜ್ಞಾಪಕ ಪತ್ರದಲ್ಲಿ ನ್ಯಾಯಯುತ, ಪಾರದರ್ಶಕ ಮತ್ತು ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ರಾಜ್ಯದ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದರು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, 16ನೇ ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವಿ ಮಡಲಾಗಿದೆ. ಒಕ್ಕೂಟ ವ್ಯವಸ್ಥೆ ಬಲ ಪಡಿಸಬೇಕು. ಎಲ್ಲಾ ರಾಜ್ಯಗಳಿಗೂ ಆದ್ಯತೆ ನೀಡಬೇಕು. ತೆರಿಗೆ ಹಂಚಿಕೆಯಲ್ಲಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಕೊಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
Key words: CM Siddaramaiah, meeting, 16th Finance Commission
The post 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.