26
August, 2026

A News 365Times Venture

26
Wednesday
August, 2026

A News 365Times Venture

16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ

Date:

ನವದೆಹಲಿ,ಜೂನ್,13,2025 (www.justkannada.in):  ದೆಹಲಿಯಲ್ಲಿ ಇಂದು ನಡೆದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ರಾಜ್ಯದ ಪ್ರಸ್ತಾವನೆಯನ್ನ ಸಲ್ಲಿಕೆ  ಮಾಡಿದರು.

ಇಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ  ಡಾ. ಅರ್ವಿಂದ್ ಪನಗಾರಿಯ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮತ್ತು ಹಣಕಾಸು ವರ್ಗಾವಣೆಗಳ ಕುರಿತು ರಾಜ್ಯದ ಆಶಯಗಳು, ನಿರೀಕ್ಷೆಗಳು ಮತ್ತು ಪ್ರಸ್ತಾವನೆಗಳನ್ನು ಮಂಡಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ,   ಮುಖ್ಯ ಕಾರ್ಯದರ್ಶಿರವರು, ಮುಖ್ಯಮಂತ್ರಿ ಕಚೇರಿ ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.

ಮಾನ್ಯ ಮುಖ್ಯಮಂತ್ರಿಗಳು ಹೆಚ್ಚುವರಿ ಜ್ಞಾಪಕ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದರೊಂದಿಗೆ, ಈ ಜ್ಞಾಪಕ ಪತ್ರದಲ್ಲಿ ನ್ಯಾಯಯುತ, ಪಾರದರ್ಶಕ ಮತ್ತು ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ರಾಜ್ಯದ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, 16ನೇ ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವಿ ಮಡಲಾಗಿದೆ.  ಒಕ್ಕೂಟ ವ್ಯವಸ್ಥೆ ಬಲ ಪಡಿಸಬೇಕು.  ಎಲ್ಲಾ ರಾಜ್ಯಗಳಿಗೂ ಆದ್ಯತೆ ನೀಡಬೇಕು. ತೆರಿಗೆ ಹಂಚಿಕೆಯಲ್ಲಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಕೊಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.vtu

Key words:  CM Siddaramaiah, meeting, 16th Finance Commission

The post 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...