ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್, ಕೊಳ್ಳೆ ಹೊಡದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ. 4 ತಿಂಗಳ ಬಳಿಕ ಬರಪೀಡಿತ ತಾಲ್ಲೂಗಳನ್ನ ಘೋಷಣೆ ಮಾಡಿದ್ದಾರೆ . ಕಾಟಾಚಾರಕ್ಕೆ ಬರ ತಾಲ್ಲೂಕುಗಳನ್ನ ಘೋಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು.
4 ತಿಂಗಳ ಹಿಂದೆಯೇ ನಾನು ಸರ್ಕಾರಕ್ಕೆ ಪತ್ರ ಬರೆದಿದ್ದೆ. ಬರಪೀಡಿತ ಸ್ಥಳಕ್ಕೆ ನಾನು ಬಿಜೆಪಿ ಅಧ್ಯಯನ ತಂಡ ಹೋಗಿತ್ತು. 175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು ಎಂದು ಆರ್.ಅಶೋಕ್ ತಿಳಿಸಿದರು.
Key words: 175 taluks, declared, drought-affected, R. Ashok
The post 175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




