ಬೆಂಗಳೂರು,ಏಪ್ರಿಲ್,5,2025 (www.justkannada.in): ರಾಜ್ಯದಲ್ಲಿ 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಲಿದ್ದು ಶಾಲೆಗಳನ್ನು ಮೇ 29ರಿಂದ ಆರಂಭಿಸಲಾಗುತ್ತದೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಎಲ್ಲಾ ಮಾದರಿಯ ಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಮೇ 29 ರಿಂದ ಸೆಪ್ಟೆಂಬರ್ 19 ರವರೆಗೆ ಮೊದಲ ಅವಧಿ ಹಾಗೂ ಅಕ್ಟೋಬರ್ 8 ರಿಂದ 2026 ರ ಏಪ್ರಿಲ್ 10 ರವರೆಗೆ ಎರಡನೇ ಅವಧಿಯಲ್ಲಿ ಶಾಲೆಗಳು ಕರ್ತವ್ಯ ನಿರ್ವಹಿಸಲಿವೆ. ಸೆಪ್ಟಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ದಸರಾ ರಜೆ ಮತ್ತು 2026ರ ಏಪ್ರಿಲ್ 11 ರಿಂದ ಮೇ 28 ರವರೆಗೆ ಬೇಸಿಗೆ ರಜೆ ಇರಲಿದೆ. ಪ್ರಸಕ್ತ ಸಾಲಿನಲ್ಲಿ 123 ದಿನಗಳು ರಜೆಯ ದಿನಗಳಾಗಿರುತ್ತವೆ. ಉಳಿದ 242 ದಿನಗಳು ಶಾಲೆ ನಡೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
Key words: Academic timetable 2025-26 , announced, Education Minister, Madhu Bangarappa
The post 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.