23
January, 2026

A News 365Times Venture

23
Friday
January, 2026

A News 365Times Venture

2026ರ ತಮಿಳುನಾಡು ಚುನಾವಣೆ;  ಇಪಿಎಸ್ ನಾಯಕತ್ವದಲ್ಲಿ ಬಿಜೆಪಿ, ಎಐಎಡಿಎಂಕೆ ಎದುರಿಸಲಿವೆ – ಅಮಿತ್ ಶಾ

Date:

 

ನವದೆಹಲಿ, ಏ.೧೧,೨೦೨೫ : ಮುಂಬರುವ 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ “ ಎನ್ಡಿಎ” ಮೈತ್ರಿಕೂಟದ ಭಾಗವಾಗಿ ಎಐಎಡಿಎಂಕೆ ಮತ್ತು ಬಿಜೆಪಿ ಸ್ಪರ್ಧಿಸಲಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ವಿಷಯವನ್ನು ಶುಕ್ರವಾರ ಖಚಿತಪಡಿಸಿದ್ದಾರೆ.

ಈ ವೇಳೆ ಅಮಿತ್‌ ಶಾ ಜತೆಗೆ ಎಐಎಡಿಎಂಕೆಯ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ವೇದಿಕೆಯಲ್ಲಿದ್ದರು.

ಬಿಜೆಪಿ ಮತ್ತು ಎಐಎಡಿಎಂಕೆ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, “ಈ ಚುನಾವಣೆಯನ್ನು ರಾಷ್ಟ್ರೀಯವಾಗಿ ನರೇಂದ್ರ ಮೋದಿ ಮತ್ತು ತಮಿಳುನಾಡಿನಲ್ಲಿ ಇಪಿಎಸ್ ಮತ್ತು ಎಐಎಡಿಎಂಕೆ ಮುನ್ನಡೆಸಲಿದ್ದಾರೆ” ಎಂದು ಹೇಳಿದರು.

ಎಐಎಡಿಎಂಕೆ 1998 ರಿಂದ ಎನ್ಡಿಎ ಭಾಗವಾಗಿದೆ ಮತ್ತು ಪ್ರಧಾನಿ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಈ ಹಿಂದೆ ಒಟ್ಟಿಗೆ ಕೆಲಸ ಮಾಡಿದ್ದಾರೆ ಎಂದು ಶಾ ಗಮನಸೆಳೆದರು.

ಅಣ್ಣಾಮಲೈ ಅವರ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡಿನ ಹೊಸ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ ದಿನವೇ ಈ ಕ್ರಮ ಕೈಗೊಳ್ಳಲಾಗಿದೆ. ಅವರ ಹೆಸರನ್ನು ಅಣ್ಣಾಮಲೈ ಅವರೇ ಪ್ರಸ್ತಾಪಿಸಿದರು ಎಂಬುದು ವಿಶೇಷ.

key words: Tamil Nadu, elections 2026, BJP, AIADMK, EPS, Amit Shah

Tamil Nadu elections 2026; BJP, AIADMK will fight under EPS leadership: Amit Shah

 

The post 2026ರ ತಮಿಳುನಾಡು ಚುನಾವಣೆ;  ಇಪಿಎಸ್ ನಾಯಕತ್ವದಲ್ಲಿ ಬಿಜೆಪಿ, ಎಐಎಡಿಎಂಕೆ ಎದುರಿಸಲಿವೆ – ಅಮಿತ್ ಶಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...