ಮಂಡ್ಯ,ಜೂನ್,23,2025 (www.justkannada.in): ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ತಿಳಿಸಿದರು.
ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್ ಗೆ ಅಗ್ನಿ ಸ್ಪರ್ಶ ನೀಡಿದರು. ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಮೂಲ ಬಂಡವಾಳಕ್ಕೆ 28 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಮೈ ಶುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಸಲ್ಲಿಸಿದ್ದಾರೆ ಎಂದರು.
ಮೈ ಶುಗರ್ ಸಕ್ಕರೆ ಕಾರ್ಖಾನೆ ರೈತರ ಏಳಿಗೆಗಾಗಿ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಕಾರ್ಖಾನೆಯನ್ನು ಲಾಭ-ನಷ್ಠ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ.ನಿಧನಗತಿಯಲ್ಲಿ ಮೈಶುಗರ್ ಸಕ್ಕರೆ ಕಾರ್ಖಾನೆ ಸಹ ಲಾಭ ಗಳಿಸಲಿದೆ. ಸಮಯಾವಕಾಶ ಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Mandya, My Sugar Sugar Factory, MLA, P. Ravikumar
The post 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ: ಶಾಸಕ ಪಿ.ರವಿಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.