25
April, 2026

A News 365Times Venture

25
Saturday
April, 2026

A News 365Times Venture

5 ವರ್ಷ  ಸಿಎಂ ಆಗಿ ಸಿದ್ದರಾಮಯ್ಯ:  ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ- MLC ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಫೆಬ್ರವರಿ,6,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ಗೊಂದಲವಿಲ್ಲ5 ವರ್ಷ  ಸಿಎಂ ಆಗಿ ಸಿದ್ದರಾಮಯ್ಯ ಇರಲಿದ್ದಾರೆ.  ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,  ಹೈ ಕಮಾಂಡ್ ನೇರವಾಗಿ ಹೇಳದೆ ಇರಬಹುದು ಆದರೆ ಸಿಗ್ನಲ್ ಕೊಟ್ಟಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ . ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಮಾಧ್ಯಮದಲ್ಲಿ ಮಾತ್ರ ಸಿಎಂ ಬದಲಾವಣೆ ಚರ್ಚೆ ಆಗುತ್ತಿದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಇಳಿಸಿ ಅಂತ ಯಾರು ಕೇಳುತ್ತಿಲ್ಲ ಎಂದರು.

ಮನರೇಗಾ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಜಟಾಪಟಿ ವಿಚಾರ, ನಾವು ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಲ್ಲಿ ಸಾಗುತ್ತಿದ್ದೇವೆ. ಬಿಜೆಪಿ ಅವರಿಗೆ ಜನರ ಕೆಲಸ ಬೇಕಿಲ್ಲ. ಗಾಂಧೀಜಿಯ ಆಶಯಗಳು ಬೇಕಿಲ್ಲ. ಅದಕ್ಕಾಗಿ ಹೆಸರು ಬದಲಾವಣೆ ಮಾಡಿದ್ದಾರೆ ಎಂದರು.

ಅವರ ಆರೋಪದಲ್ಲಿ ಯಾವುದೇ ಉರುಳಿಲ್ಲ

ಕೆ.ಜೆ ಜಾರ್ಜ್ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಮೂಗು ತೂರಿಸಿದ್ದಾರೆ ಎಂಬ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಆ ಬಗ್ಗೆ ನಿಜಕ್ಕೂ ನನಗೆ ಗೊತ್ತಿಲ್ಲ. ಖುದ್ದು ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಸುಖಾ ಸುಮ್ಮನೆ ನನ್ನ ಹೆಸರನ್ನು ಬಿಜೆಪಿ ಎಳೆದು ತರುವ ಕೆಲಸ ಮಾಡಿದೆ. ಅವರ ಆರೋಪದಲ್ಲಿ ಯಾವುದೇ ಉರುಳಿಲ್ಲ. ಸದನದಲ್ಲೂ ಕೂಡ ಬಿಜೆಪಿ ನನ್ನ ಹೆಸರು ಹೇಳಿದೆ. ಈ ಹಿಂದಿನಿಂದಲೂ ನನ್ನ ಟಾರ್ಗೆಟ್ ಮಾಡಿಕೊಂಡು ಬಂದಿದ್ದಾರೆ. ಅವರ ಆರೋಪ ಸುಳ್ಳು  ಎಂದು ಸ್ಪಷ್ಟಪಡಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ,  ನಾನು ಕೂಡ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ಮಾಡೋದನ್ನು ಸ್ವಾಗತಿಸುತ್ತೇನೆ. ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ಇವಿಎಂ ಮಿಷನ್ ರದ್ದು ಮಾಡಿ ಬ್ಯಾಲೆಟ್ ಪೇಪರ್ ಬಳಸುತ್ತಿದ್ದಾರೆ. ತಂತ್ರಜ್ಞಾನದಲ್ಲಿ ಮುಂದುವರೆದ ರಾಷ್ಟ್ರಗಳೇ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆಗೆ ಮುಂದಾಗಿದೆ. ನನ್ನ ಅಭಿಪ್ರಾಯವು ಅದೇ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸುವುದು ಸೂಕ್ತ. ಇದು ನನ್ನ ಅಭಿಪ್ರಾಯ ಎಂದರು.

ಮುಡಾ ಹಗರಣ ಕೋರ್ಟ್ ಬಿ ರಿಪೋರ್ಟ್ ಪುರಸ್ಕಾರ ವಿಚಾರ, ನಮಗೆ ಕಾನೂನಿನಲ್ಲಿ ನಂಬಿಕೆ ಇತ್ತು. ನಾವೇನೂ ತಪ್ಪು ಮಾಡಿರಲಿಲ್ಲ. ಕೋರ್ಟ್ ತೀರ್ಪು ಸ್ವಾಗತ ಮಾಡುತ್ತೇವೆ. ನಮ್ಮ ತಾಯಿ ಕೂಡ ಸಂತೋಷ ವ್ಯಕ್ತಪಡಿಸಿದ್ದಾರೆ. ಸ್ನೇಹಮಯಿ ಕೃಷ್ಣ ಹೋರಾಟ ಮಾಡಲಿ. ಕಾನೂನು ಎಲ್ಲರಿಗೂ ಒಂದೇ ಎಂದು ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Key words: Siddaramaiah, CM, 5 years, MLC, Yathindra Siddaramaiah

The post 5 ವರ್ಷ  ಸಿಎಂ ಆಗಿ ಸಿದ್ದರಾಮಯ್ಯ:  ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ- MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,...

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್

ಬೆಳಗಾವಿ,ಏಪ್ರಿಲ್,25,2026 (www.justkannada.in): ‘ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇಲ್ಲ. ‘ಅಧಿಕಾರ ಹಂಚಿಕೆ...

ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್

ಮೈಸೂರು,ಏಪ್ರಿಲ್,25,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ...

ಮಹಿಳಾ ಮೀಸಲು ಕಾಯ್ದೆ ಸೋಲಲು ಬಿಜೆಪಿ ನೇರ ಕಾರಣ- ಕೆ.ವಿ. ಮಲ್ಲೇಶ್ ಆರೋಪ

ಮೈಸೂರು,ಏಪ್ರಿಲ್,25,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲು ಕಾಯಿದೆಗೆ ಸೋಲು ಉಂಟಾಗಲು ಕೇಂದ್ರ...