ಬೆಂಗಳೂರು,ಮಾರ್ಚ್,6,2025 (www.justkannada.in): ನಾಳೆ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದೀರಿ. ಆದರೆ ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದರು.
ಗ್ಯಾರಂಟಿ ಯೋಜನೆಗೆ ಎಸ್ ಸಿಎಸ್ಪಿ, ಟಿಎಸ್ಪಿ ಹಣವನ್ನ ಬೇರೆ ಯೋಜನೆಗಳಿಗೆ ಬಳಕೆ ಮಾಡುವುದನ್ನ ವಿರೋಧಿಸಿ ಸರಕಾರದ ವಿರುದ್ದ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಬಿವೈ ವಿಜಯೇಂದ್ರ, ದಲಿತರ ಅಭಿವೃದ್ದಿಗೆ ಮೀಸಲಿಟ್ಟ ಹಣ ಬೇರೆ ಕಾರಣಕ್ಕೆ ಬಳಕೆ ಮಾಡಲಾಗುತ್ತಿದೆ. ಈ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ. ನಿಮ್ಮ ಧ್ವನಿಯಾಗಿ ನಾನು ಬಂದಿದ್ದೇನೆ. ಇಂತಹ ಕರಾಳ ದಿನ ನಿರೀಕ್ಷೆ ಮಾಡಿರಲಿಲ್ಲ. ದಲಿತರು ಬೀದಿಗಿಳಿದು ಹೋರಾಟ ಮಾಡುವ ಕಾಲ ಬಂದಿದೆ. ಸಿದ್ದರಾಮಯ್ಯನವರೇ ದಲಿತರ ಪರ ಕಾಳಜಿ ಎಲ್ಲಿಗೆ ಹೋಯಿತು ಅಧಿಕಾರ ಬಂದ ಮೇಲೆ ಕಾಂಗ್ರೆಸ್ ಗೆ ದಲಿತರ ಮೇಲಿನ ಕಾಳಜಿ ಮುಗಿಯಿತಾ ..? ಸಿದ್ದರಾಮಯ್ಯ ಅನುಭವಿ ಸಿಎಂ ಆದರೆ ಅಸಹಾಯಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಹಿಂದೆ ಬಿಎಸ್ ವೈ ಅಧಿಕಾರದಲ್ಲಿದ್ದಾಗ ಸುಳ್ಳು ಭರವಸೆ ನೀಡಿಲ್ಲ . ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ. 25 ಸಾವಿರ ಕೋಟಿಗೂ ಹೆಚ್ಚು ಹಣ ದುರ್ಬಳಕೆಯಾಗಿದೆ. ನಾವು ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ‘
Key words: Budget, Don’t, misusing, Dalit community, money, B.Y. Vijayendra
The post ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




