2
July, 2026

A News 365Times Venture

2
Thursday
July, 2026

A News 365Times Venture

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು

Date:

ಮಂಗಳೂರು, ಜುಲೈ,1,2026 (www.justkannada.in): ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು  ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಮಂಗಳೂರು ನಗರದ ಕಂಕನಾಡಿಯಲ್ಲಿ ನಡೆದಿದೆ.

ಅನಾಮಿಕ ಚೌರಾಸಿಯ(8), ಪರಿ (4), ಮಹಿಳೆ ಶಾಂತ (46) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತಪಟ್ಟವರು ಬಿಹಾರ ಮೂಲದವರು ಎನ್ನಲಾಗಿದೆ. ಭಾರೀ ಮಳೆಗೆ ಹಳೆಯ ಹಂಚಿನ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಇಂದು ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಒಟ್ಟು ನಾಲ್ಕು ಕುಟುಂಬಗಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದವು. ಈ ಪೈಕಿ ಒಂದು ಮನೆಯಲ್ಲಿ ಬಿಹಾರ ಮೂಲದ ಕುಟುಂಬ ವಾಸವಿತ್ತು. ಗಂಡ ಲಾಲ್ ಬಾಬು, ಪತ್ನಿ ಇಂದು, ಮಕ್ಕಳಾದ ಅನುಷಾ, ಅಲ್ಕಾ, ಅನಾಮಿಕ ಚೌರಾಸಿಯ, ಪರಿ ಜೊತೆ ವಾಸವಾಗಿದ್ದರು. ಈ ಪೈಕಿ ಅನಾಮಿಕ ಚೌರಾಸಿಯ(8), ಪರಿ (4)  ಸಾವನ್ನಪ್ಪಿದ್ದಾರೆ. ಲಾಲ್ ಬಾಬು ಹಾಗೂ ಪತ್ನಿ ಇಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ಮನೆಯಲ್ಲಿ ಬಾಲಕೃಷ್ಣ, ಶಾಂತಾ ದಂಪತಿ ವಾಸವಾಗಿದ್ದರು. ಇದರಲ್ಲಿ ಮಹಿಳೆ ಶಾಂತ (46) ಸಾವಿಗೀಡಾಗಿದ್ದಾರೆ. ಸದ್ಯ ಗಾಯಾಳುಗಳಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Key words: Three dead, after, roof of house, collapses, heavy rain

The post ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

52 ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

ಬೆಂಗಳೂರು,ಜುಲೈ,2,2026 (www.justkannada.in): 52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ  ರಾಜ್ಯ ಸರ್ಕಾರದ ಕ್ರಮಕ್ಕೆ...

ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು ದಕ್ಷಿಣ, ಜುಲೈ, 2, 2026 (www.justkannada.in):  ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,1,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ...