3
July, 2026

A News 365Times Venture

3
Friday
July, 2026

A News 365Times Venture

ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು, ಜುಲೈ,2,2026 (www.justkannada.in):  “ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಇದು ಸಂಭವಿಸಿಲ್ಲ ಎಂಬ ಮಾಹಿತಿ ಬಂದಿದ್ದು, ಈ ಕ್ವಾರಿ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಇಲ್ಲವೇ ಎಂಬ ವರದಿಯನ್ನು ಪಡೆದು ನಂತರ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

ಕಳೆದ ಬಾರಿ ಸ್ಫೋಟದ ವೇಳೆ ಚಿರತೆ ಸತ್ತಿತ್ತು ಈ ಹಿಂದೆ ತನಿಖೆ ಮಾಡದೇ ಪ್ರಕರಣ ಮುಚ್ಚಿಹಾಕಲಾಗಿತ್ತು ಎಂಬ ಸ್ಥಳೀಯ ಶಾಸಕರ ಆರೋಪದ ಬಗ್ಗೆ ಕೇಳಿದಾಗ, “ಶಾಸಕರು ನಮಗೆ ಮಾಹಿತಿ ನೀಡಿದ್ದು, ಅಧಿಕೃತ ವರದಿ ತರಿಸಿಕೊಂಡು ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಪರಿಹಾರದ ವಿಚಾರವಾಗಿ ಕೇಳಿದಾಗ, “ಮೊದಲು ಎಷ್ಟು ಜನ ಸತ್ತಿದ್ದಾರೆ ಎಂಬ ಮಾಹಿತಿಗಳು ಬರಲಿ, ಆನಂತರ ಪರಿಹಾರದ ಬಗ್ಗೆ ತೀರ್ಮಾನ ಮಾಡೋಣ. ತರಾತುರಿಯಲ್ಲಿ ಪರಿಹಾರ ಘೋಷಿಸಿದ ಮಾತ್ರಕ್ಕೆ ಸತ್ತವರು ಮರಳಿ ಬರುವುದಿಲ್ಲ. ಇದಕ್ಕೆಲ್ಲಾ ಅದರದೇ ಆದ ಪ್ರಕ್ರಿಯೆಗಳಿವೆ. ಖಂಡಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ” ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: Quarry, death, workers, official report, Action, CM, D.K. Shivakumar

The post ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕ್ವಾರಿ ದುರಂತ: ತಕ್ಷಣವೇ ಸರ್ಕಾರ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,2,2026 (www.justkannada.in): ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು- MLC ಸಿ.ಟಿ ರವಿ

ಬೆಂಗಳೂರು,ಜುಲೈ,2,2026 (www.justkannada.in): ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ವಚನ ಸಾಹಿತ್ಯವನ್ನು ಬೆಳಕಿಗೆ ತಂದಿದ್ದೇ ಫ.ಗು.ಹಳಕಟ್ಟಿ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,2,2026 (www.justkannada.in): ಅಜ್ಞಾತವಾಗಿದ್ದು, ಎಲ್ಲೆಲ್ಲೋ ಚೆಲ್ಲಾಪಿಲ್ಲಿಯಾಗಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ ಬೆಳಕಿಗೆ...

ಮೈಸೂರು: 24 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಬಿಯರ್ ಹಾಗೂ ವೈನ್ ನಾಶ

ಮೈಸೂರು, ಜುಲೈ,2,2026 (www.justkannada.in): ಅಬಕಾರಿ ಇಲಾಖೆಯು ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ...