ಬೆಂಗಳೂರು, ಜುಲೈ 11,2026 (www.justkannada.in): ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಪರಮೇಶ್ವರ್, ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಕೇಂದ್ರ ಸರ್ಕಾರ ಎಂದಿಗೂ ಜಾತಿ ಪ್ರಮಾಣಪತ್ರಗಳನ್ನು ನೀಡಿಲ್ಲ. ರಾಜ್ಯ ಸರ್ಕಾರವೇ ಇಲ್ಲಿಯವರೆಗೆ ಅವುಗಳನ್ನು ನೀಡಿದೆ. ಇದೀಗ ವಾಸಸ್ಥಳ ಪ್ರಮಾಣಪತ್ರಗಳನ್ನು ಆಧಾರ್ ಕಾರ್ಡ್ನಂತಹ ದಾಖಲೆಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.
ಚುನಾವಣಾ ಆಯೋಗವು ಎಸ್ ಐಆರ್ ಗೆ 13 ಮಾನದಂಡಗಳನ್ನು ನಿಗದಿಪಡಿಸಿದೆ. ಅದರಲ್ಲಿ ವಾಸಸ್ಥಳದ ಪ್ರಶ್ನೆ ಕೂಡ ಇದೆ. ರಾಜ್ಯ ಸರ್ಕಾರವು ತನ್ನ ಮಿತಿಯಲ್ಲಿ, ಹಿಂದೆ ಜಾತಿ ಪ್ರಮಾಣಪತ್ರಗಳನ್ನು ನೀಡಿದಂತೆಯೇ ಇದೀಗ ವಾಸಸ್ಥಳ ಪ್ರಮಾಣಪತ್ರವನ್ನು ನೀಡುತ್ತಿದೆ’’ ಎಂದು ಪರಮೇಶ್ವರ್ ತಿಳಿಸಿದರು.
Key words: permanent residence certificate, DCM, Parameshwar, BJP
The post ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




