ಮಂಡ್ಯ,ಜುಲೈ,31,2026 (www.justkannada.in): ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ಮತ್ತು ತಮಿಳುನಾಡಿಗೆ ನೀರು ಹರಿಸಂತೆ ಆಗ್ರಹಿಸಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ.
ಕದ್ದುಮುಚ್ಚಿ ನೀರು ಬಿಡುತ್ತಿದೆ- ಶ್ರೀವತ್ಸ
ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಶ್ರೀವತ್ಸ ಮಾತನಾಡಿ, ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ನೀರು ಬಿಡಬೇಡಿ ಸರ್ಕಾರದ ಜೊತೆ ನಾವಿದ್ದೇವೆ. ಸಂದೇಶ ಕೊಡಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಕದ್ದು ಮುಚ್ಚಿ ನೀರು ಬಿಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
Key words: BJP, protests, KRS, water, not be, released , Tamil Nadu
The post ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹ: ಕೆಆರ್ ಎಸ್ ನಲ್ಲಿ ಬಿಜೆಪಿ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




