14
August, 2026

A News 365Times Venture

14
Friday
August, 2026

A News 365Times Venture

KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ

Date:

ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕರ ಹುದ್ದೆಗೆ ಐಎಎಸ್ ಅಧಿಕಾರಿಗಳ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಪ್ರಸನ್ನ ಎಚ್., ಐಎಎಸ್ (2017 ಬ್ಯಾಚ್) ಅವರನ್ನು ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹುದ್ದೆಗೆ ಹೆಚ್ಚುವರಿ ಹೊಣೆಗಾರಿಕೆಯಲ್ಲಿ ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರು ಈ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಈ ಹಿಂದೆ ಪರೀಕ್ಷಾ ನಿಯಂತ್ರಕರಾಗಿದ್ದ ದಿಗ್ವಿಜಯ್ ಬೋಡ್ಕೆ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಲವಿಷ್ ಒರ್ಡಿಯಾ, ಐಎಎಸ್ (2020 ಬ್ಯಾಚ್) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಎಸ್‌ಸಿಯ ಜಂಟಿ ಪರೀಕ್ಷಾ ನಿಯಂತ್ರಕರಾಗಿ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ. ಈ ಹುದ್ದೆ ಖಾಲಿ ಇತ್ತು.

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹಾಗೂ ಜಂಟಿ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಐಎಎಸ್ ವೇತನ ನಿಯಮಗಳು, 2016ರ ನಿಯಮ 12ರ ಅನ್ವಯ ಹಿರಿಯ ಶ್ರೇಣಿಯ ಐಎಎಸ್‌ನ ನಿರ್ದೇಶಕ, ಪೌರಾಡಳಿತ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಯ ಹುದ್ದೆಗಳೆಂದು ಸರ್ಕಾರ ಘೋಷಿಸಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವೆಗಳು-11) ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ರಾಜ್ಯಪಾಲರ ಹೆಸರಿನಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ.

Key words: KPSC, New, Examination Controllers, Prasanna H. IAS

The post KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ – ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ...

80ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರಗಳಲ್ಲಿ ಮತ್ತೆ ಹಾರಲಿವೆ ತ್ರಿವರ್ಣ ಧ್ವಜ

ಮೈಸೂರು,ಆಗಸ್ಟ್,12,2026 (www.justkannada.in):  ದೇಶವೇ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ...

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

ಬೆಂಗಳೂರು,ಆಗಸ್ಟ್,12,2026 (www.justkannada.in):  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ .ಎಸ್ ಪೊನ್ನಣ್ಣ...

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,12,2026 (www.justkannada.in):  ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ...