22
August, 2026

A News 365Times Venture

22
Saturday
August, 2026

A News 365Times Venture

ಹನೂರು ಶೂಟೌಟ್ ಗೆ ಮೂವರು ಬಲಿ ಕೇಸ್:  ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

Date:

ಚೆನ್ನೈ, ಆಗಸ್ಟ್,​​ 18,2026 (www.justkannada.in):  ಚಾಮರಾಜನಗರ ಜಿಲ್ಲೆಯ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ  ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣ ಸಂಬಂಧ ತಮಿಳುನಾಡು ಸರ್ಕಾರ ಮೃತರ ಕುಟುಂಬಗಳಿಗೆ ತಲಾ  10 ಲಕ್ಷ ರೂ.ಪರಿಹಾರ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಲ್ಲಿನ ವಿಧಾನ ಸಭೆ ಕಲಾಪದಲ್ಲೂ ಹನೂರು ಶೂಟೌಟ್​​ ವಿಚಾರ ಪ್ರಸ್ತಾಪವಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ರಂಜಿತ್ ಕುಮಾರ್ ಘೋಷಿಸಿದ್ದಾರೆ ಎನ್ನಲಾಗಿದೆ.

ಹನೂರಿನಲ್ಲಿ ನಡೆದಿರುವ ಈ ಘಟನೆ ಬಗ್ಗೆ ತಮಿಳುನಾಡು ವಿಧಾನ ಸಭೆಯಲ್ಲಿ ಭಾರಿ ಚರ್ಚೆಯಾಗಿದ್ದು, ಮೃತರೆಲ್ಲರೂ ತಮಿಳುನಾಡು ಮೂಲದವರು. ಮೆಟ್ಟೂರು ಜಲಾಶಯ ನಿರ್ಮಾಣದಿಂದ ಹನೂರಿನಲ್ಲಿ ಅವರು ವಾಸವಿದ್ದಾರೆ, ಅವರೆಲ್ಲ ತಮಿಳರು, ಅವರ ರಕ್ಷಣೆಯಾಗಬೇಕು ಎಂಬ  ಚರ್ಚೆಗಳು ನಡೆದಿವೆ. ಸದನದಲ್ಲಿ ವ್ಯಕ್ತವಾಗಿವೆ. ಅರಣ್ಯಾಧಿಕಾರಿಗಳು ಬಿಡುಗಡೆ ಮಾಡಿದ ಫೋಟೋಗಳಲ್ಲಿ ಸ್ಟಿಕ್ಕರ್ ತೆಗೆಯದ ಹೊಸ ಚಪ್ಪಲಿ ಇರುವ ಬಗ್ಗೆಯೂ ಚರ್ಚೆಯಾಗಿದೆ. ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಯಾಗಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

Key words: Three Death, Hanur shootout, case, Tamil Nadu government, announces, compensation

The post ಹನೂರು ಶೂಟೌಟ್ ಗೆ ಮೂವರು ಬಲಿ ಕೇಸ್:  ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್  ಅನ್ನು HD ಕುಮಾರಸ್ವಾಮಿ ಮಾಡಿ ಈಗ ನಮ್ಮ ಮೇಲೆ ಹೇಳುತ್ತಿದ್ದಾರೆ-ಸಚಿವ ಹೆಚ್ ಸಿ ಬಾಲಕೃಷ್ಣ

ರಾಮನಗರ,ಆಗಸ್ಟ್,22,2026 (www.justkannada.in):   ಬಿಡದಿ ಟೌನ್ ಶಿಪ್  ಅನ್ನು ಹೆಚ್ ಡಿ ಕುಮಾರಸ್ವಾಮಿ...

ಭಾರತದ ಶಿಕ್ಷಣ ವ್ಯವಸ್ಥೆ ಈಗ RSS ಅಡ್ಡೆಯಾಗಿದೆ- ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ,ಆಗಸ್ಟ್,22,2026 (www.justkannada.in): ಭಾರತದ  ಶಿಕ್ಷಣ ವ್ಯವಸ್ಥೆ  ಈಗ ಆರ್ ಎಸ್ ಎಸ್...

ದಸರಾ ಗಜಪಯಣಕ್ಕೆ ದಿನಾಂಕ ನಿಗದಿ: ಆ. 26ರಂದು ಚಾಲನೆ

ಮೈಸೂರು,ಆಗಸ್ಟ್,22,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಪೂರ್ವಭಾವಿ ಕಾರ್ಯಕ್ರಮವಾದ...

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ

ಬೆಂಗಳೂರು, ಆಗಸ್ಟ್,21,2026 (www.justkannada.in): ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ...