ನಲ್ಗೊಂಡ,ಆಗಸ್ಟ್,20,2026 (www.justkannada.in): ತಂದೆ ತಾಯಿ ಮತ್ತು ಶಿಕ್ಷಕರನ್ನ ದೇವರ ಸಮಾನ ಎಂದು ಹೇಳುತ್ತಾರೆ. ಆದರೆ ವಿದ್ಯಾರ್ಥಿಗಳೇ ಕ್ಷುಲ್ಲಕ ಕಾರಣಕ್ಕೆ ಶಾಲೆಯ ಪ್ರಾಂಶುಪಾಲರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದಲ್ಲಿ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ರೂಪಾರೆಡ್ಡಿ ಎಂಬುವವರೇ 10ನೇ ತರಗತಿ ವಿದ್ಯಾರ್ಥಿಗಳಿಂದ ಹತ್ಯೆಯಾದವರು.
ಶಾಲೆಯಲ್ಲಿ ಓರ್ವ ವಿದ್ಯಾರ್ಥಿ ಬ್ಯಾಗ್ ನಲ್ಲಿ ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲೆ ರೂಪಾರೆಡ್ಡಿ ಅವರು ವಿದ್ಯಾರ್ಥಿಯನ್ನು ಹಾಸ್ಟೆಲ್ ನಿಂದ ಹೊರಹಾಕಿದ್ದರು. ಹೀಗಾಗಿ ಪ್ರಿನ್ಸಿಪಾಲ್ ಮೇಲೆ ವಿದ್ಯಾರ್ಥಿಗೆ ದ್ವೇಷ ಉಂಟಾಗಿದೆ.
ಇದೇ ದ್ವೇಷದಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ರೂಪಾರೆಡ್ಡಿ ಮನೆಗೆ ನುಗ್ಗಿ ಚಾಕುವಿನಿಂದ 27 ಬಾರಿ ಇರಿದು ಕೊಲೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ 2 ಲಕ್ಷ ರೂ. ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
Key words: School principal, murdered, by, students
The post ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




