ಬೆಂಗಳೂರು,ಆಗಸ್ಟ್,22,2026 (www.justkannada.in): ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ಅವರ ವಿರುದ್ದ 3.85 ಕೋಟಿ ರೂ, ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.
ಸಿನಿಮಾ ನಿರ್ಮಾಣದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಭಾಸ್ಕರ್ ಶೆಟ್ಟಿ ಸೇರಿ ನಾಲ್ವರು ಓಂ ಪ್ರಕಾಶ್ ರಾವ್ ಅವರ ವಿರುದ್ದ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಗಳೂರು ಪೊಲೀಸ್ ಆಯುಕ್ತರಿಗೂ ದೂರು ನೀಡಲಾಗಿದೆ.
‘ಫಿನಿಕ್ಸ್’ ಎಂಬ ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿ ಓಂ ಪ್ರಕಾಶ್ ರಾವ್ ಅವರು ಭಾಸ್ಕರ್ ಶೆಟ್ಟಿ ಅವರಿಂದ ಒಟ್ಟು 3 ಕೋಟಿ 85 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಕೇವಲ ಆರು ತಿಂಗಳೊಳಗೆ ಸಂಪೂರ್ಣ ಹಣವನ್ನು ಹಿಂದಿರುಗಿಸುವುದಾಗಿ ಓಂ ಪ್ರಕಾಶ್ ಭರವಸೆ ನೀಡಿದ್ದರು. ಆದರೆ, ವ್ಯವಹಾರ ನಡೆದು ಮೂರು ವರ್ಷ ಕಳೆದರೂ ಹಣ ವಾಪಸ್ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಾಗೆಯೇ ‘ಹಣ ವಾಪಸ್ ಕೇಳಿದಾಗಲೆಲ್ಲಾ ನಿರ್ದೇಶಕ ಓಂಪ್ರಕಾಶ್ ರಾವ್ ಅವರು ವಿವಿಧ ಕಾರಣಗಳನ್ನು ನೀಡಿ ಕಾಲಹರಣ ಮಾಡುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಅವರು ಸಂಪರ್ಕಕ್ಕೂ ಸಿಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ನನಗೆ ಸೇರಿದ ಹಣವನ್ನು ಕೇಳಲು ಓಂ ಪ್ರಕಾಶ್ ಅವರ ಮನೆಗೆ ತೆರಳಿದ್ದಾಗ, ಅಲ್ಲಿ ಬೆದರಿಕೆ ಹಾಕಲಾಗಿದೆ ಎಂದು ದೂರುದಾರ ಭಾಸ್ಕರ್ ಶೆಟ್ಟಿ ಆರೋಪಿಸಿದ್ದಾರೆ.
Key words: alleged, fraud,Complaint, against, director, Om Prakash Rao
The post 3.85 ಕೋಟಿ ರೂ, ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ದ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




