24
August, 2026

A News 365Times Venture

24
Monday
August, 2026

A News 365Times Venture

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

Date:

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು ಸಾಕಷ್ಟು ಇದೀಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.  ಮೂಡಿಸಿದೆ.

ಅಧಿಕಾರಿ ಜ್ಞಾನೇಂದ್ರ ಕುಮಾರ್  ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದರು.

ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ ಕೆಪಿಎಸ್ ಸಿಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದ್ದು, ಇಡಿ  ದಾಳಿ ನಡೆದ ಮರುದಿನವೇ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿರದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜ್ಞಾನೇಂದ್ರ ಕುಮಾರ್ ದೆಹಲಿಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದರು ಎನ್ನಲಾಗಿದೆ.

Key words: IAS officer, Gyanendra Kumar, mysteriously, Missing

The post IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ ಶಿವಕುಮಾರ್...

ತಮಿಳುನಾಡಿಗೆ ಹರಿದ ನೀರು: ಕಬಿನಿ ಡ್ಯಾಂ ಖಾಲಿ : ಇಂದು ರೈತರಿಂದ ಹೋರಾಟ

ಮೈಸೂರು,ಆಗಸ್ಟ್,24,2026 (www.justkannada.i):  ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದ್ದು...

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ ಜಪಾನ್‌ನ...

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...