5
September, 2026

A News 365Times Venture

5
Saturday
September, 2026

A News 365Times Venture

ಸಾಲಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು, ಸೆಪ್ಟಂಬರ್,4,2026 (www.justkannada.in):  “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಇಂದು ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ , ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು. ಬರಗಾಲಕ್ಕೆ ಕೇಂದ್ರ  ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.  

ಬರಗಾಲ; ವಿಪಕ್ಷಗಳಿಂದ ರಾಜಕಾರಣ

“ಬರ ಪರಿಸ್ಥಿತಿ ಕುರಿತಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ವಿಪಕ್ಷಗಳಿಗೆ ರೈತರು ಹಾಗೂ ಬರ ಪರಿಸ್ಥಿತಿಯ ಬಗ್ಗೆ ಅಧ್ಯಯನ ಮಾಡಲು, ಚರ್ಚಿಸಲು ಕಿಂಚಿತ್ತೂ ಆಸಕ್ತಿ ಇಲ್ಲ. ಬರ ಪರಿಸ್ಥಿತಿ ಚರ್ಚೆ ಬಗ್ಗೆ ಜನತಾ ದಳ ಮತ್ತು ಬಿಜೆಪಿ ಶಾಸಕರೇ ನನ್ನ ಬಳಿ ಬಂದು ಬೇಸರ ತೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ವಿಶೇಷ ಅಧಿವೇಶನ ನಡೆಸಲಿದ್ದೇವೆ. ಆಯಾ ಕ್ಷೇತ್ರಗಳ  ಭಾವನೆ, ಪರಿಸ್ಥಿತಿ ಅರ್ಥಮಾಡಿಕೊಂಡು ನಾನು ಅವರಿಗೆ ಸಹಾಯ ಮಾಡಬೇಕು. ನೈಜ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಬದಲು ವಿಪಕ್ಷಗಳು ರಾಜಕಾರಣ ಮಾಡುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

3 ದಿನಗಳ ವಿಶೇಷ ಅಧಿವೇಶನ

“ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ರಾಜ್ಯ ಸರ್ಕಾರವು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನದಲ್ಲಿ ಸಂಪೂರ್ಣವಾಗಿ ರಾಜ್ಯದ ಬರ ಪರಿಸ್ಥಿತಿ, ರೈತರ ತೊಂದರೆಗಳು ಮತ್ತು ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿಗೆ ರಾಜ್ಯ ಸಲ್ಲಿಸಬೇಕಾದ ಆಕ್ಷೇಪಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಅಧಿವೇಶನವನ್ನು 7 ದಿನಗಳಿಗೆ ವಿಸ್ತರಿಸಬೇಕೆಂಬ ವಿಪಕ್ಷಗಳ ಬೇಡಿಕೆಯ ಬಗ್ಗೆ ಕೇಳಿದಾಗ, “ಎಲ್ಲರ ಅಭಿಪ್ರಾಯವನ್ನು ನಾವು ಕೇಳುತ್ತೇವೆ. ಕೆಲವು ನಾಯಕರು ಮಾತ್ರ ತಕರಾರು ಮಾಡುತ್ತಾರೆ ಎಂದರೆ ಉಳಿದ ಶಾಸಕರು ಏನು ಮಾಡಬೇಕು. ಎಲ್ಲರೂ ಜನ ಪ್ರತಿನಿಧಿಗಳೇ, ಚರ್ಚೆಗಳಾಗಲಿ” ಎಂದರು.

ಬೆಂಗಳೂರು ದಟ್ಟಣೆ ತಪ್ಪಿಸಬೇಕು:

ನೀತಿ ಆಯೋಗದ ಜತೆಗಿನ ಸಭೆಯಲ್ಲಿ ರಾಜ್ಯಕ್ಕೆ ಅನುದಾನ ಹಂಚಿಕೆ ಸರಿಯಾಗಿ ಆಗಬೇಕು ಎಂದು ಆಗ್ರಹಿಸಿದ್ದೀರಿ ಎಂದು ಕೇಳಿದಾಗ, “ಹೊಸ ಬೆಂಗಳೂರು ನಿರ್ಮಾಣ ಮಾಡಬೇಕೆಂದು ನೀತಿ ಆಯೋಗದ ಉಪಾಧ್ಯಕ್ಷರ ಬಳಿ ಚರ್ಚಿಸಲಾಗಿದೆ. ಅದಕ್ಕೆ ಅಗತ್ಯವಿರುವ ನೆರವನ್ನು ಸರ್ಕಾರ ನೀಡಲಿದೆ ಎಂದರು. ಕರ್ನಾಟಕ , ಬೆಂಗಳೂರು ಬಹಳ ಮುಖ್ಯ ಎಂದೂ ಅವರು ಹೇಳಿದ್ದಾರೆ” ಎಂದು ತಿಳಿಸಿದರು.

ಬಿಜೆಪಿಯವರು ಅಭಿವೃದ್ದಿಯ ವಿರೋಧಿಗಳು

ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ಆರೋಪಗಳ ಬಗ್ಗೆ ಕೇಳಿದಾಗ, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ  ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು. ಲಾಲ್ ಬಾಗ್ ನಲ್ಲಿಯೇ ಟನಲ್ ಮಾಡಬೇಕೆಂಬ ಉದ್ದೇಶವಿಲ್ಲ. ಇದಕ್ಕೆ ಪರ್ಯಾಯ ಮಾರ್ಗವನ್ನು ಪರಿಶೀಲಿಸಲಾಗುವುದು. ಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡಲು ಹೊರಟಾಗಲು ಬಿಜೆಪಿ ವಿರೋಧಿಸಿತ್ತು. ಬಿಜೆಪಿಯವರು ಅಭಿವೃದ್ದಿಯ ವಿರೋಧಿಗಳು. ಬೆಂಗಳೂರಿಗೆ ಏನಾದರೂ ಶಾಪವಿದ್ದರೆ ಅದು ಬಿಜೆಪಿಯವರದ್ದು. ಅವರ ಕಾಲದಲ್ಲಿ ಒಂದು ಯಾವುದಾದರೂ ಈ ರೀತಿಯ ಗುರುತರ  ಯೋಜನೆ ಪಾರಂಭಿಸಿದ್ದರೆ ತಿಳಿಸಲಿ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಮಾರ್ಗಗಳು, ಯೋಜನೆಗಳು ಅತ್ಯಗತ್ಯ. ಟನಲ್ ರಸ್ತೆ ಬೇಡ ಎನ್ನುವವರು ಅದಕ್ಕೆ ಪರ್ಯಾಯ ಏನು ಎಂಬುದನ್ನು ಹೇಳಬೇಕಲ್ಲವೇ” ಎಂದು ಸವಾಲು ಹಾಕಿದರು.

ನಾಲಿಗೆಯ ಮೇಲೆ ಹತೋಟಿ ಇರಲಿ

“ನಾನು ಸಿಎಂ ಸ್ಥಾನದಲ್ಲಿ ಕೂತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬಳಸುವ ಪದಗಳನ್ನು ಬಳಸಲಾಗುವುದಿಲ್ಲ. ನನಗೆ ಗೌರವ ಕೊಡದಿದ್ರೂ ನಾಡಿನ ಜನತೆ ಹಾಗೂ ಪಕ್ಷ ಕೊಟ್ಟಿರುವ ಸ್ಥಾನಕ್ಕಾದರೂ ಬೆಲೆ ಕೊಡಲಿ. ನಿಮ್ಮ ನಾಲಿಗೆಯ ಮೇಲೆ ಹತೋಟಿ ಇರಲಿ ಎಂದು ನಮ್ರತೆಯಿಂದ ಹೇಳುತ್ತಿದ್ದೇನೆ. ನಿಮ್ಮ ತಂದೆಯವರೂ ಕೂಡ ಇದೇ  ಸ್ಥಾನವನ್ನು ಅಲಂಕರಿಸಿದ್ದರು ಎನ್ನುವ ಪರಿವೆ ಇರಲಿ. ಅವರ ಬೇಡಿಕೆಗಳನ್ನು ಕೇಳಲಿ, ಅದರಲ್ಲಿ ತಪ್ಪಿಲ್ಲ. ಈ ಬಗ್ಗೆ ಸದನದಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ಮಾಡಿಕೊಡಲು ಮಾತ್ರ ವಿಧೇಯಕ ಹಿಂಪಡೆಯಲಾಗಿದೆ” ಎಂದರು.

ಉದ್ಯಾನವನವನ್ನು ಮಾರುತ್ತಿಲ್ಲ

“ಚರ್ಚೆ ಮಾಡಬೇಕೆನ್ನುವ  ಕಾರಣದಿಂದ ವಿಧೇಯಕವನ್ನು ಹಿಂಪಡೆಯಲಾಗಿದೆ. 16.5 ಕಿ.ಮೀ ಟನಲ್ ರಸ್ತೆ ಯೋಜನೆಗಾಗಿ ಲಾಲ್‌ಬಾಗ್ ಜಾಗವನ್ನು ಕಬಳಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ನಾವು ಉದ್ಯಾನವನಗಳನ್ನು ಮಾರಾಟ ಮಾಡುತ್ತಿಲ್ಲ. ಮೆಟ್ರೋಗೆ ಜಾಗ ಕೊಡಲು ಭೂಮಿಯನ್ನು ವರ್ಗಾಯಿಸಬೇಕು” ಎಂದು ಸ್ಪಷ್ಟಪಡಿಸಿದರು.

“ನಾವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ, ಅದರಿಂದ ಅವರ ವೈಫಲಯಗಳು ಬಯಲಾಗುತ್ತವೆ ಎಂದು ತಿಳಿದೇ ಅಧಿವೇಶನವನ್ನು ನಡೆಸಲು ವಿರೋಧ ಪಕ್ಷದವರು ಬಿಡಲಿಲ್ಲ” ಎಂದು ತಿಳಿಸಿದರು.

ನಾನು ಅವರಷ್ಟು ವಿದ್ಯಾವಂತರಲ್ಲದಿದ್ದರೂ ನನಗೂ ದೇವರು ಅಷ್ಟೋ ಇಷ್ಟೋ ಸಾಮಾನ್ಯ ಜ್ಞಾನ ಕೊಟ್ಟಿದ್ದಾರೆ.  ಜೆಪಿ ಪಾರ್ಕ್ ಸೇರಿದಂತೆ ಎಲ್ಲಾ ಸ್ಥಳಗಳ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಅನಾವಶ್ಯಕವಾಗಿ ನನ್ನನ್ನು  ಕೆಣಕುವುದು ಬೇಡ” ಎಂದು ತಿರುಗೇಟು ನೀಡಿದರು.

ನಮ್ಮ ಯಾತ್ರೆಯನ್ನೂ ನೋಡಿ

“ಮೆಟ್ರೋ, ಶಾಸಕರ ಭವನ,ಪ್ರೆಸ್ ಕ್ಲಬ್, ಬಸವ ಭವನ,  ಹೈಕೋರ್ಟ್ ಪಾರ್ಕಿಂಗ್ ಹಾಗೂ ಇಂದಿರಾ ಗಾಂಧಿ ಫೌಂಟೇನ್‌ಗೆ ಹಿಂದೆ ಸಾರ್ವಜನಿಕ ಭೂಮಿಯನ್ನೇ ನೀಡಲಾಗಿತ್ತು. ಕಾಲಕಾಲಕ್ಕೆ ಕೆಲವು ನಿರ್ಣಯಗಳಾಗಿವೆ. ಎಲ್ಲಾ ಸೇರಿ ಕೆಲಸ ಮಾಡೋಣ ಎಂದು ಈಗಾಗಲೇ ಹೇಳಿದ್ದೇನೆ. ಸಲಹೆ  ಸ್ವೀಕಾರ ಮಾಡಿದರೆ ಯೂ ಟರ್ನ್ ಮಾಡಿದ್ದೇನೆ ಎಂದಾಗುತ್ತದೆಯೇ” ಎಂದು ಪ್ರಶ್ನಿಸಿದರು.

“ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದರು. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ನನ್ನ ಯಾತ್ರೆಯನ್ನೂ ನೀವು ನೋಡಿ” ಎಂದರು.

ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ನನ್ನನ್ನೇ ಪತನ ಮಾಡುವುದಾಗಿ ಕೆಲವರು ಹೇಳಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗಲಿ ಸಂತೋಷ. ತಪ್ಪು ಮಾಡಿದ್ದರೆ  ಎಲ್ಲರೂ ಶಿಕ್ಷೆಗೆ ಒಳಗಾಗಬೇಕು, ಅದಕ್ಕೆ ನಾನೂ ಹೊರತಾಗಿಲ್ಲ” ಎಂದರು.

ಪ್ರಾಸಿಕ್ಯೂಷನ್ ಅನುಮತಿ; ಪರಿಶೀಲನೆ ಬಾಕಿ ಇದೆ

“ಈಗ ನಾನು ಪ್ರಾಸಿಕ್ಯೂಷನ್ ಅನುಮತಿ, ಬಗ್ಗೆ  ಯೋಚನೆ ಮಾಡಿಲ್ಲ. ಬಿ. ನಾಗೇಂದ್ರ, ಜಿ. ಜನಾರ್ದನ ರೆಡ್ಡಿ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಕಡತಗಳು ಬಂದಿವೆ. ಅದನ್ನು  ಇನ್ನೂ ಕಾನೂನಾತ್ಮಕವಾಗಿ ಪರಿಶೀಲಿಸಿಲ್ಲ. ಸಾರಾಂಶ ಸರಿಯಿದೆಯೇ ಎಂದು ಪರಿಶೀಲಿಸಬೇಕಿದೆ. ಒಬ್ಬರಿಗೆ ಒಂದು ಆಗಿದೆಯೇ ಎಂದು ಪರಿಶೀಲಿಸಬೇಕು.  ಈ ಬಗ್ಗೆ ಯಾವುದೇ ಆತುರದ ನಿರ್ಧಾರ ಕೈಗೊಳ್ಳಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ದೆಹಲಿ, ಮಹಾರಾಷ್ಟ್ರಗಳಲ್ಲಿ ಟನಲ್  ನಿಲ್ಲಿಸಲಿ

“ಲಾಲ್ ಬಾಗ್ ವಿಚಾರದಲ್ಲಿ ತೋಟಗಾರಿಕಾ ಇಲಾಖೆಯ ಸ್ಥಳವನ್ನು ವರ್ಗಾಯಿಸುವ ಜಾಗವಾಗಿದ್ದು, ಹಿಂದೆಲ್ಲಾ  ವಿಶೇಷ ಆದೇಶಗಳನ್ನು ಸಣ್ಣ ಸಣ್ಣ  ಜಾಗಗಳಿಗೆ ಮಾಡಲಾಗಿದೆ. ಅಧಿಕಾರಿಗಳು ಇದನ್ನು ಪ್ರಸ್ತಾಪಿಸಿದಾಗ ಒಪ್ಪಿಗೆ ನೀಡಲಾಗಿದೆಯೇ ಹೋರತು, ಟನಲ್ಗಾಗಿಯೇ ಮಾಡುತ್ತಿದ್ದೇವೆ ಎಂದಲ್ಲ. ಹಾಗಾದರೆ ವಿಪಕ್ಷಗಳು ದೆಹಲಿ, ಮಹಾರಾಷ್ಟ್ರಗಳಲ್ಲಿ ಟನಲ್  ನಿಲ್ಲಸಲಿ. ಜಾರ್ಜ್ ಅವರ ಕಾಲದಲ್ಲಿ ಸ್ಟೀಲ್ ಸೇತುವೆಯನ್ನು ನಿಲ್ಲಿಸಿದರು. ವಾಹನಗಳನ್ನು  ನಿಲ್ಲಿಸಿ ಎಂದು ಹೇಳಲಾಗುತ್ತದೆಯೇ? ಮೆಟ್ರೋಗೆ ಏನು ಬೇಕೋ ಅದನ್ನು ಮಾಡುತ್ತಿದ್ದೇವೆ. 40 ಕಿ.ಮೀ ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ಕೇಳಿದರೆ, 13 ಕಿ.ಮೀ ಮಾತ್ರ ಮಾಡಿ ಎಂದಿದ್ದಾರೆ. ಡಬಲ್ ಡೆಕ್ಕರ್ ನಿಂದ ಮೇಲ್ಸೇತುವೆಯಲ್ಲಿ ಕಾರು ಹಾಗೂ ಇತರೆ ವಾಹನ ಸಾಗುತ್ತದೆ. ಅದರ ಮೇಲೆ ಮೆಟ್ರೋ ಹೋಗುತ್ತಿತ್ತು. ಆದರೂ ಆದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಾರೆ. ಇದು ಬಿಜೆಪಿಯ ನಿಲುವು. ಚೆನ್ನೈನಲ್ಲಿ 20 ಕಿ.ಮೀ ಡಬ್ಬಲ್ ಡೆಕ್ಕರ್ ಇದೆ” ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ: ರಾಜ್ಯದ ಹಿತಾಸಕ್ತಿಯ ವಿಚಾರ

“ಕಸ್ತೂರಿ ರಂಗನ್ ವರದಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರಸ್ಕರಿಸಿದರು. ಸುಮಾರು ಜಿಲ್ಲೆ ಗ್ರಾಮಗಳಿಗೆ ಇದರಿಂದ ಪರಿಣಾಮ ಬೀರಲಿದೆ ಎಂದು ವಿಚಾರ ಮಾಡಬೇಕಿದೆ. ಇದು ರಾಜ್ಯದ ಹಿತಾಸಕ್ತಿಯ ವಿಚಾರ. ಹೀಗಾಗಿ ಈ ಬಗ್ಗೆ ಚರ್ಚೆಗೆ ಅಧಿವೇಶನ ಕರೆಯಲಾಗಿದೆ” ಎಂದರು.

ಮೈಸೂರು ದಸರಾ ಸಂಭ್ರಮಕ್ಕೆ ಹೊಸ ಮೆರುಗು

“ಮೈಸೂರು ದಸರಾ ಸಿದ್ದತೆಗಳ ಬಗ್ಗೆ ಕೇಳಿದಾಗ, “ದಸರಾ ಸಿದ್ಧತೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಹೊಸ ಚಿಂತನೆ, ಆಲೋಚನೆಗಳು, ಹೊಸ ಆವಿಷ್ಕಾರಗಳನ್ನು ದಸರಾದಲ್ಲಿ ತರಲಾಗುವುದು. ಭಾರತೀಯ ವಾಯುಪಡೆ ಹಾಗೂ ರಕ್ಷಣಾ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗಿದ್ದು, ವಾಯುಪಡೆಯ ತುಕಡಿಯನ್ನು ಒಳಗೊಳ್ಳಲು ಹಾಗೂ ಬೀದರ್, ಗುಲ್ಬರ್ಗ ಸೇರಿದಂತೆ ದಕ್ಷಿಣ ಭಾರತದ ವಿವಿಧ ಸಾಂಸ್ಕೃತಿಕ ಕಲೆಗಳನ್ನು ಪ್ರದರ್ಶಿಸಲು ನಿರ್ಧರಿಸಲಾಗಿದೆ. ದಸರಾ ಆಚರಣೆ ಕುರಿತು ಅನೇಕ ಸಲಹೆಗಳನ್ನು ಸ್ವೀಕರಿಸಲಾಗಿದೆ” ಎಂದು ತಿಳಿಸಿದರು.

Key words: All-party delegation, Delhi, loan waiver, CM D.K. Shivakumar

The post ಸಾಲಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಡಿಕೆಶಿಗಿಂತ ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯ

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಗಿಂತ  ಸೂಪರ್ ಸಿಎಂ  ಇದ್ದಾರೆ...

ಕರ್ನಾಟಕ–ಫಿನ್‌ಲ್ಯಾಂಡ್‌ ಕೌಶಲ್ಯಾಭಿವೃದ್ಧಿಗೆ ಹೊಸ ಬಲ: ವಿದ್ಯಾರ್ಥಿ, ಶಿಕ್ಷಕರಿಗೆ ಜಾಗತಿಕ ಅವಕಾಶ

ಬೆಂಗಳೂರು, ಸೆಪ್ಟಂಬರ್,4,2026 (www.justkannada.in):  ಕರ್ನಾಟಕದ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ವ್ಯವಸ್ಥೆಯನ್ನು...

ಮೈಸೂರು ದಸರಾ 2026: ಯುವದಸರಾ ಉದ್ಘಾಟಿಸಲಿದ್ದಾರೆ ‘ಇಂಡಿಯನ್ ಮೈಕೆಲ್ ಜಾಕ್ಸನ್’ ಪ್ರಭುದೇವ

ಮೈಸೂರು,ಸೆಪ್ಟಂಬರ್,4,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಭರ್ಜರಿ ಸಿದ್ಧತೆಗಳು...

ಬಸವರಾಜ ಕನ್ನಾಳೆ ಬಾಲ್ಕಿಯ ಬಿಜೆಪಿ ಕಾರ್ಯಕರ್ತ: ನನ್ನ ವಿರುದ್ದ ಸ್ಪರ್ಧೆಗೆ ಸಿದ್ದತೆ ನಡೆಸಿದ್ದ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಕೆಪಿಎಸ್ ಸಿ ಹಗರಣದಲ್ಲಿ ಬಂಧಿತನಾಗಿರುವ ಬಸವರಾಜ ಕನ್ನಾಳೆ ಬಾಲ್ಕಿಯ...