11
March, 2026

A News 365Times Venture

11
Wednesday
March, 2026

A News 365Times Venture

ಕರೆಂಟ್ ಶಾಕ್  ಹೊಡೆದು ಮಹಿಳೆ ಬಲಿ: 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಜಮೀರ್

Date:

ಬೆಂಗಳೂರು,ಮಾರ್ಚ್,13,2025 (www.justkannada.in): ನೀರು ಹಿಡಿಯುವ ವೇಳೆ  ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣ  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ.

ಸೆಲ್ವಿ ಮೃತಪಟ್ಟ ಮಹಿಳೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಬೆನ್ನಲ್ಲೆ ಮೈಸೂರು ರಸ್ತೆ ಎರಡೂ ಕಡೆ ಸಂಪೂರ್ಣ ಬಂದ್ ಆಗಿದ್ದು, ನ್ಯಾಯ ಬೇಕು ಎಂದು ಘೋಷಣೆ ಕೂಗಿ  ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ ಸಚಿವ ಜಮೀರ್ ಅಹ್ಮದ್ ಖಾನ್ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ್ದು ಈ ಮಧ್ಯೆ ಮೃತ ಮಹಿಳೆ ಸೆಲ್ವಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ್ದಾರೆ ಎನ್ನಲಾಗಿದೆ.

Key words: Woman, dies, electric shock, Bangalore

The post ಕರೆಂಟ್ ಶಾಕ್  ಹೊಡೆದು ಮಹಿಳೆ ಬಲಿ: 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹೌದು...

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು...

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...