18
September, 2026

A News 365Times Venture

18
Friday
September, 2026

A News 365Times Venture

ತಣ್ಣೀರುಬಾವಿ ಬೀಚ್‌ ನಲ್ಲಿ ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

Date:

ಮಂಗಳೂರು,ಸೆಪ್ಟಂಬರ್,17,2026 (www.justkannada.in):  ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್‌ ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಪರಿಸರ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸ್ವಚ್ಛ ಹಾಗೂ ನೈರ್ಮಲ್ಯಯುತ ವಾತಾವರಣ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವುದರ ಜೊತೆಗೆ, ಪ್ರವಾಸೋದ್ಯಮದ ಬೆಳವಣಿಗೆಯ ಮೂಲಕ ಸ್ಥಳೀಯ ಆರ್ಥಿಕತೆಗೂ ಉತ್ತೇಜನ ನೀಡುತ್ತದೆ ಎಂದು ಹೇಳಿದರು.

ರಾಜ್ಯದ ನಗರ ಪ್ರದೇಶಗಳ ಪ್ರಮುಖ ಸ್ಥಳಗಳ ಸೌಂದರ್ಯೀಕರಣ, ಸಾರ್ವಜನಿಕ ಪ್ರದೇಶಗಳ ನೈರ್ಮಲ್ಯ ಕಾಪಾಡುವುದು ಹಾಗೂ ತ್ಯಾಜ್ಯ ವಿಂಗಡಣೆಗೆ (Waste Segregation) ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ. ಸ್ವಚ್ಛತೆಯನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ನಿರಂತರ ಜನಾಂದೋಲನವಾಗಿ ರೂಪಿಸಬೇಕು ಎಂದು ಅವರು ಕರೆ ನೀಡಿದರು.

ಅಭಿಯಾನದ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಸಾಮೂಹಿಕವಾಗಿ ‘ಸ್ವಚ್ಛತಾ ಪ್ರತಿಜ್ಞೆ’ ಸ್ವೀಕರಿಸಿದರು. ಬಳಿಕ ಬೀಚ್ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ, ಆಯುಕ್ತ ರಾಹುಲ್ ರತ್ನಂ ಪಾಂಡೆ, ಪೌರಕಾರ್ಮಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಯುವಜನರು ಸಕ್ರಿಯವಾಗಿ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಿದರು.

Key words: Minister, Yathindra Siddaramaiah, Swachhata Seva, campaign, Tannirbhavi Beach.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಡಿತರ ಕಾರ್ಡುದಾರರಿಗೆ ಗುಡ್ ನ್ಯೂಸ್: ಇ-ಕೆವೈಸಿ ಅಂತಿಮ ದಿನಾಂಕ ವಿಸ್ತರಣೆ

ಬೆಂಗಳೂರು,ಸೆಪ್ಟಂಬರ್,17,2026 (www.justkannada.in):  ಇ-ಕೆವೈಸಿ  ಮಾಡಿಸಲು ಸರ್ವರ್ ಸಮಸ್ಯೆಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದ...

50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್: 14 ದಿನ ನ್ಯಾಯಾಂಗ ಬಂಧನ

ಧಾರವಾಡ,ಸೆಪ್ಟಂಬರ್,17,2026 (www.justkannada.in):  50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್...

ಪತ್ರಿಕಾರಂಗದಲ್ಲಿ SC,ST, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಸಿಗಬೇಕು- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 17 ,2026 (www.justkannada.in): ಪತ್ರಿಕಾರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ...

ಮಂಗಳೂರು ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್‌ ಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಮಂಗಳೂರು,ಸೆಪ್ಟಂಬರ್,17,2026 (www.justkannada.in):  ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆದ ಪ್ರಗತಿ...