21
September, 2026

A News 365Times Venture

21
Monday
September, 2026

A News 365Times Venture

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

Date:

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ.

ವಿಶೇಷ ಅಧಿವೇಶನದಲ್ಲಿ ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿ ವಿಚಾರಗಳು  ಪ್ರಮುಖ ಅಜೆಂಡಾವಾಗಿದ್ದು. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಗಿಬೀಳಲು ಸಜ್ಜಾಗಿದೆ. ,ವಿಪಕ್ಷಕ್ಕೆ ತಿರುಗೇಟು ನೀಡಲು ಕಾಂಗ್ರೆಸ್‌ ಕೂಡ ಅಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದೆ.

ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು ಬೆಳೆಹಾನಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದಾರೆ. ಕಳೆದ ತಿಂಗಳು ಮುಂಗಾರು ಅಧಿವೇಶನದಲ್ಲಿ  11 ದಿನಗಳ ಗದ್ದಲದಲ್ಲೇ ಮುಗಿದಿತ್ತು. ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದು ಪ್ರತಿದಿನ ಧರಣಿ, ಪ್ರತಿಭಟನೆ ನಡೆಸಿದ್ದರಿಂದ ಕಲಾಪಕ್ಕೆ ಸರಿಯಾಗಿ ನಡೆದಿರಲಿಲ್ಲ.  ಬರ ಸೇರಿದಂತೆ ಯಾವುದೇ ಸಮಸ್ಯೆಗಳ ಬಗ್ಗೆ ಚರ್ಚೆಯಾಗದ ಹಿನ್ನೆಲೆಯಲ್ಲಿ ಇದೀಗ ಇಂದಿನಿಂದ  ಮೂರು ದಿನಗಳ ಕಾಲ  ವಿಶೇಷ ಅಧಿವೇಶನ ಕರೆಯಲಾಗಿದೆ. ಬೆಳಗ್ಗೆ 11 ಗಂಟೆಗೆ ಸದನ ಆರಂಭವಾಗಲಿದ್ದು, ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...