21
September, 2026

A News 365Times Venture

21
Monday
September, 2026

A News 365Times Venture

ಹಸಿ ಮತ್ತು ಒಣ ಕಸವನ್ನು ‌ಮೂಲದಲ್ಲೇ ಬೇರ್ಪಡಿಸುವ ಬಗ್ಗೆ ಜಾಗೃತಿ ಮೂಡಿಸಿ- ಸಿ. ಶಂಕರ ಅಂಕನಶೆಟ್ಟಿಪುರ

Date:

ಮೈಸೂರು, ಸೆಪ್ಟಂಬರ್‌, 21,2026 (www.justkannada.in): ಸಾರ್ವಜನಿಕರು ಕಸವನ್ನು ಪೌರಕಾರ್ಮಿಕರಿಗೆ ನೀಡುವ ಮೊದಲೇ ಹಸಿ ಮತ್ತು ಒಣ ಕಸವನ್ನು  ಬೇರ್ಪಡಿಸುವ ನೀಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಸಿ ಶಂಕರ ಅಂಕನಶೆಟ್ಟಿಪುರ ಅವರು ತಿಳಿಸಿದರು.

ಇಂದು ಮೈಸೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಪ್ರಗತಿ‌ ಪರಿಶೀಲನಾ ಸಭೆ ನಡೆಸಿದರು. ಮೊದಲಿಗೆ ಪೌರಕಾರ್ಮಿಕ ರೊಂದಿಗೆ ಸಂವಾದ ನಡೆಸಿ ಅವರಿಗೆ ಇರುವ ತೊಂದರೆಗಳ ಬಗ್ಗೆ ಸಿ ಶಂಕರ ಅಂಕನಶೆಟ್ಟಿಪುರ  ಮಾಹಿತಿ ಪಡೆದುಕೊಂಡರು.

ಕಸ ಸಂಗ್ರಹಿಸುವ ವಾಹನ ವಿಭಾಗದ ವಾಹನ ಚಾಲಕರು, ಸಹಾಯಕರು ಸಹ ಸ್ವಚ್ಚತಾ ಕೆಲಸ ನಿರ್ವಹಿಸುವ ಭಾಗವಾಗಿದ್ದು,  ಇವರಿಗೆ ದೊರಕುತ್ತಿರುವ ಸಂಬಳ‌ ಕಡಿಮೆಯಿರುತ್ತದೆ, ಸಂಬಳ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೇ ತೊಂದರೆಗಳನ್ನು‌ ಸರಿಪಡಿಸಲಾಗುವುದು ಎಂದರು.

ಪೌರಕಾರ್ಮಿಕರ ಮಕ್ಕಳು ಪೌರಕಾರ್ಮಿಕರಾಗಬೇಕು ಎಂಬ ಧೋರಣೆ ಯನ್ನು ತೊರೆಯಬೇಕು‌. ಪೌರಕಾರ್ಮಿಕರು, ಒಳಚರಂಡಿ, ವಾಹನ ಚಾಲಕರು ಹಾಗೂ ಸಹಾಯಕರು ಇವರ ಮಕ್ಕಳು ವಿದ್ಯಾಭ್ಯಾಸದ ಮಾಹಿತಿಯನ್ನು ಪರಿಸರ ಅಭಿಯಂತರರಿಂದ ಸಂಗ್ರಹಿಸಿ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಮಾಡುವಂತೆ ಪ್ರೇರೇಪಿಸಿ. ಅವರಿಗೆ ಮಹಾನಗರ ಪಾಲಿಕೆಯ ಶೇ 24.10, ಸಮಾಜ ಕಲ್ಯಾಣ ಸೇರಿದಂತೆ ಇನ್ನಿತರೆ ಇಲಾಖೆಯಿಂದ ದೊರಕುವ ಸೌಲಭ್ಯವನ್ನು ಒದಗಿಸಿ ಪೌರಕಾರ್ಮಿಕರ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಎಂದರು.

ಖಾಯಂ ಪೌರಕಾರ್ಮಿಕರಿಗೆ ಈಗಾಗಲೇ ಗೃಹ ಭಾಗ್ಯ ಯೋಜನೆಯಡಿ ನಿವೇಶನ ಹಾಗೂ ಮನೆ ಒದಗಿಸುವ ಕೆಲಸವಾಗುತ್ತಿದೆ. ನೇರ ಪಾವತಿ, ಒಳಚರಂಡಿ ಪೌರಕಾರ್ಮಿಕರು, ಲೋಡರ್, ಕ್ಲೀನರ್ ಹಾಗೂ ವಾಹನ ಚಾಲಕರಿಗೂ ಸಹ ಬೆಳಿಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ಶ್ರಮಿಸಿ ನಗರದ ನೈರ್ಮಲ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡುವಲ್ಲಿ  ಪ್ರಮುಖ ಪಾತ್ರ ವಹಿಸುತ್ತಾರೆ. ಇವರಿಗೂ ಸಹ ಮನೆ ನಿರ್ಮಾಣಕ್ಕಾಗಿ ರಾಜೀವ್ ಗಾಂಧಿ ವಸತಿ ನಿಗಮ ಅಥವಾ ಸರ್ಕಾರದ ಇತರ ವಸತಿ ಯೋಜನೆಗಳ ಅಡಿಯಲ್ಲಿ ವಿಶೇಷ ಅನುದಾನ ಹಾಗೂ ಮನೆ ಮಂಜೂರಾತಿ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನದ ಸವಿನೆನಪಿಗಾಗಿ ನವೆಂಬರ್ 7  ರಂದು  ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌರಕಾರ್ಮಿಕರಿಗೆ ಹಾಗೂ ಚಾಲಕರಿಗೆ ಯಾವುದೇ ರೀತಿಯ ಕಿರುಕುಳವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಮೇಸ್ತ್ರಿಗಳು ಅಥವಾ ಅಧಿಕಾರಿಗಳು ತೊಂದರೆ ನೀಡಿದರೆ ಪಾಲಿಕೆ ಆಯುಕ್ತರಿಗೆ ದೂರು ನೀಡಿ, ಅಲ್ಲಿ ಪರಿಹಾರ ಸಿಗದಿದ್ದರೆ ಆಯೋಗವು ಕಠಿಣ ಕ್ರಮ ಜರುಗಿಸಲಿದೆ ಎಂದು ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಅವರು ಮಾತನಾಡಿ  ಕಾರ್ಮಿಕರು ತಮ್ಮ ಕುಂದುಕೊರತೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ‘ಸಿಂಗಲ್ ವಿಂಡೋ’ ವ್ಯವಸ್ಥೆ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಪರಿಸರ ಅಭಿಯಂತರರು ಹಾಗೂ ಹೆಲ್ತ್ ಇನ್‌ಸ್ಪೆಕ್ಟರ್ ಗಳಿಗೆ ದೂರು ನೀಡಬಹುದು. ಅಲ್ಲಿ ಬಗೆಹರಿಯದಿದ್ದರೆ  ಹೆಚ್ಚುವರಿ ಆಯುಕ್ತರ ಹಂತದಲ್ಲಿ ಪರಿಹರಿಸಲು ಅಧಿಕಾರ ವಿಕೇಂದ್ರೀಕರಣ ಮಾಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸಂಶೋಧನಾಧಿಕಾರಿ ಮಹದೇವಸ್ವಾಮಿ, ಕಾರ್ಯದರ್ಶಿ ರಘು, ರಾಜೇಂದ್ರ, ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತೆ ವೀಣಾ ಸೇರಿದಂತೆ‌ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ...

ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಹುಚ್ಚಾಟ: ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮೈಸೂರು, ಸೆಪ್ಟಂಬರ್‌,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ...

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...