22
September, 2026

A News 365Times Venture

22
Tuesday
September, 2026

A News 365Times Venture

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

Date:

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.

ದೇಶಾದ್ಯಂತ ಸದ್ದು ಮಾಡಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹೊಸದಾಗಿ ತನಿಖೆಗೆ ಕೋರ್ಟ್​​ ಆದೇಶಿಸಿದ್ದು, 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಸೌಜನ್ಯ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಹೊಸ ತಂಡದಿಂದ ಸ್ವತಂತ್ರವಾಗಿ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸೂಚಿಸಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದೆ.   ಈ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಈ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.

ಸಿಬಿಐ ತನಿಖೆಯಲ್ಲಿ ಲೋಪದೋಷಗಳಿದ್ದು, ನೈಜ ಆರೋಪಿಗಳನ್ನು ರಕ್ಷಿಸಲಾಗಿದೆ ಎಂದು ಆರೋಪಿಸಿ ಸೌಜನ್ಯಾ ತಾಯಿ ಕುಸುಮಾವತಿ ಅವರು ಮರುತನಿಖೆಗೆ ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...

ಕಬಿನಿ ನಾಲೆಗಳಿಗೆ  ನೀರು ಹರಿಸುವಂತೆ ರೈತರಿಂದ  ಬೃಹತ್ ಪ್ರತಿಭಟನೆ, ಆಕ್ರೋಶ

ಮೈಸೂರು,ಸೆಪ್ಟಂಬರ್‌, 21,2026 (www.justkannada.in): ಕಬಿನಿ  ಜಲಾಶಯದಿಂದ ನಾಲೆಗಳಿಗೆ  ನೀರು ಹರಿಸುವಂತೆ ಆಗ್ರಹಿಸಿ...

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...