30
September, 2026

A News 365Times Venture

30
Wednesday
September, 2026

A News 365Times Venture

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆ  ನಮಗೆ ಪತ್ರ ಬರೆದಿದ್ದಾರೆ: ಸಿಎಂ ಡಿ. ಕೆ ಶಿವಕುಮಾರ್

Date:

ಚಾಮರಾಜನಗರ, ಸೆಪ್ಟಂಬರ್‌,30,2026 (www.justkannada.in) ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್‌ ಟೀಕಿಸಿದರು.

ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್ ಬಿ ಹೆಲಿಪ್ಯಾಡ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್‌, 30 ಸಾವಿರ ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿಲ್ಲ ಎಂಬ ಗುತ್ತಿಗೆದಾರರ ಪತ್ರದ ಬಗ್ಗೆ ಕೇಳಿದಾಗ, “ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಕೊಟ್ಟ ಕೆಲಸಗಳು ಮುಗಿಯುತ್ತಿದ್ದು, ಬಿಲ್ ನೀಡಬೇಕಾಗಿದೆ. ನಾನು ಅದರ ಬಗ್ಗೆ ಆಲೋಚನೆ ಮಾಡುವೆ. ಗುತ್ತಿಗೆದಾರರು ಉಳಿಯಬೇಕು. ಹೀಗಾಗಿ ಸಧ್ಯದಲ್ಲೇ ಆಲೋಚನೆ ಮಾಡುತ್ತೇನೆ” ಎಂದರು.

ಈಗಲೂ ಪರ್ಸೆಂಟೇಜ್ ಕಮಿಷನ್ ನೀಡಬೇಕು ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಅಫಿಡವಿಟ್ ಸಲ್ಲಿಸಲಿ. ಈ ಬಗ್ಗೆ ತನಿಖೆ ಮಾಡಿಸಲಾಗುವುದು” ಎಂದರು.

490 ಕೋಟಿ ಮೊತ್ತದ ನೀರಾವರಿ ಯೋಜನೆ ಶಂಕುಸ್ಥಾಪನೆ ಯಾವಾಗ ಎಂದು ಕೇಳಿದಾಗ, “ಈ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ಅನೇಕ ಸಮಿತಿಗಳಿದ್ದು, ಅಲ್ಲೂ ಚರ್ಚೆಯಾಗಬೇಕು. ನಂತರ ಮಂಡಳಿಗಳಲ್ಲಿ ಅನುಮತಿ ಪಡೆದು, ಸಚಿವ ಸಂಪುಟ ಅನುಮತಿ ಪಡೆದು ಟೆಂಡರ್ ಕರೆಯಬೇಕು. ಆ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಇದಕ್ಕೆ ಆದ ಪ್ರಕ್ರಿಯೆಗಳಿವೆ” ಎಂದು ವಿವರಿಸಿದರು.

ಬಿಜೆಪಿ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ಮಾಡಿದ್ದ ತಿದ್ದುಪಡಿ ರದ್ದು ಮಾಡಬೇಕು ಎಂದು ಬಿ ಆರ್ ಪಾಟೀಲ್ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಈ ವಿಚಾರ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮರುಪರಿಶೀಲನೆ ವೇಳೆ ಜಾತಿ ಪ್ರಮಾಣಪತ್ರ ಕೇಳುತ್ತಿರುವ ಬಗ್ಗೆ ಕೇಳಿದಾಗ, “ಹೊರ ರಾಜ್ಯದವರು ಇಲ್ಲಿ ಯೋಜನೆ ಪಡೆಯುತ್ತಿದ್ದಾರೆ ಎಂಬ ಕಾರಣಕ್ಕೆ ನಾವು ಹೊಸ ಅರ್ಜಿ ಸಿದ್ಧಪಡಿಸಿದ್ದೇವೆ. ಯಾರು ನಮ್ಮ ಮತದಾರರು, ಅರ್ಹರಿದ್ದಾರೆ ಅವರನ್ನು ಪರಿಗಣಿಸಲಾಗುವುದು. ಇನ್ನು ನಾವು ಮರುಪರಿಶೀಲನೆ ಅರ್ಜಿ ವಿತರಣೆ ಮಾಡಿಲ್ಲ” ಎಂದು ತಿಳಿಸಿದರು.

ಚುನಾವಣಾ ಆಯೋಗ ಪ್ರಜಾಸತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ

ಸಿಡ್ಬ್ಲ್ಯೂಸಿ ಸಭೆಯಲ್ಲಿ ಎಸ್ ಐಆರ್ ರದ್ಧತಿಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಳಿದಾಗ, “ನಮ್ಮ ವಿರೋಧ ಒಂದು ಕಡೆ ಇರಲಿ, ಮೋದಿ ಸರ್ಕಾರ ನಿಯೋಜಿಸಿದ್ದ ಇನ್ನಿಬ್ಬರು ಆಯುಕ್ತರು ಕೆಲವು ನಿರ್ಧಾರಗಳ ಬಗ್ಗೆ ಅಪಸ್ವರ ಎತ್ತಿದ್ದರಲ್ಲ. ಆಯೋಗ ಪ್ರಜಾಸತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಲ್ಲಿ ತಪ್ಪುಗಳು ಆಗಿವೆ ಎಂಬುದು ಗೊತ್ತಾಗಿದೆ. ಜನರ ಭಾವನೆ, ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯುವ ಕೆಲಸವಾಗುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ತಿಳಿಸಿದರು.

ಚಾಮರಾಜನಗರ ನನಗೆ ಪ್ರಿಯಾವಾದ ಸ್ಥಳ:

ಚಾಮರಾಜನಗರ ನನ್ನ ಪ್ರಿಯಾವಾದ ಸ್ಥಳ. ನನ್ನ ಕ್ಷೇತ್ರ ಇದರ ಜೊತೆ ಗಡಿ ಹಂಚಿಕೊಂಡಿದೆ. ಇದು ಹಸಿರಿನ ತಪ್ಪಲು, ಇಲ್ಲಿನ ಜನ ಶ್ರಮಜೀವಿಗಳು. ಕೃಷಿಯೇ ಅವರ ಬದುಕು. ಎಲ್ಲಾ ವರ್ಗದ ಜನರಿಗೆ ಆಶ್ರಯ ನೀಡಿರುವ ಪುಣ್ಯಭೂಮಿ. ಮಲೆ ಮಾದೇಶ್ವರನ ಇತಿಹಾಸದ ಭೂಮಿ. ಈ ಭಾಗಕ್ಕೆ ಸಂಸ್ಕಾರದ ಆಸ್ತಿ. ಈ ಭಾಗದ ಜನರ ನಂಬಿಕೆ. ನನ್ನ ಕ್ಷೇತ್ರದ ಮೂಲಕ ಸಾವಿರಾರು ಜನ ಪಾದಯಾತ್ರೆ ಮೂಲಕ ಕಾವೇರಿ ನದಿ ದಾಟಿ ಭಕ್ತಿಯಿಂದ ಈ ಧಾರ್ಮಿಕ ಕೇಂದ್ರಕ್ಕೆ ಬರುತ್ತಾರೆ” ಎಂದರು. ಬಿಳಿಗಿರಿರಂಗನ ಬೆಟ್ಟ, ಗೋಪಾಲಸ್ವಾಮಿ ಬೆಟ್ಟ, ಸಿದ್ದಾಪ್ಪಾಜಿ ದೇವಾಲಯಗಳಿವೆ. ನಾನು ಸಿದ್ದಪ್ಪಾಜಿ ದೇವಾಲಯಕ್ಕೆ ನಡೆದುಕೊಂಡು ಬಂದಿರುವೆ. ಪ್ರತಿ ವರ್ಷ ಸಂಕ್ರಾಂತಿ ಬಳಿಕ ಸಿದ್ದಪ್ಪಾಜಿಗೆ ಪೂಜೆ ಮಾಡುವುದು ನಮ್ಮ ಕುಟುಂಬದ ಪದ್ಧತಿ ಇದೆ. ಅಲ್ಲಿ ನಮ್ಮ ಆಸ್ತಿ ಇದ್ದು, ಅಲ್ಲಿ ಸಮುದಾಯ ಭವನ ಮಾಡುವ ಆಲೋಚನೆ ಇದೆ. ಇದು ಹಿಂದುಳಿದ ವರ್ಗದ ಪ್ರದೇಶ ಎಂಬ ಭಾವನೆ ಇದೆ. ಹೀಗಾಗಿ ಸಿದ್ದರಾಮಯ್ಯ ಅವರ ನಮ್ಮ ಸರ್ಕಾರ ಮಲೆ ಮಾದೇಶ್ವರನ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಮಾಡಿ ಅನೇಕ ಘೋಷಣೆ ಮಾಡಲಾಗಿತ್ತು. ನೀರಾವರಿ ಅಭಿವೃದ್ಧಿಗೂ ಈ ವರ್ಷ ಎಲ್ಲಾ ಕ್ಷೇತ್ರಗಳಲ್ಲೂ ಕಾಮಗಾರಿ ಕೈಗೊಳ್ಳಲಾಗಿದೆ. ಅಭಿವೃದ್ಧಿ ಕೆಲಸ ಆರಂಭಿಸಲು ಬಂದಿದ್ದೇನೆ” ಎಂದು ಹೇಳಿದರು.

ಶಿಕಾರಿಪುರದಿಂದ ಕಾಂಗ್ರೆಸ್ ಪಕ್ಷದ ಯಾತ್ರೆ ಬಗ್ಗೆ ಕೇಳಿದಾಗ, “ಹರಿಪ್ರಸಾದ್ ಅವರು ಪಕ್ಷದ ಸಂಘಟನೆಗೆ ಈ ಯಾತ್ರೆ ಮಾಡುತ್ತಿದ್ದಾರೆ.  ಭಾರತ ಜೋಡೋ ಅದು ರಾಹುಲ್ ಗಾಂಧಿ ಅವರದ್ದು. ಅದರ ನೆನಪಿನಲ್ಲಿ ನಮ್ಮ ಅಧ್ಯಕ್ಷರು ಕಾರ್ಯಕ್ರಮ ರೂಪಿಸಿದ್ದಾರೆ” ಎಂದರು.

Finance Department, written disastrous, actions, BJP governments, CM, D.K. Shivakumar.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

BK ಹರಿಪ್ರಸಾದ್ ಪಾದಯಾತ್ರೆ ಮಾಡಿ ಅನುಕಂಪ ಗಿಟ್ಟಿಸಿಕೊಳ್ಳುತ್ತಿದ್ದಾರೆ-ಬಿವೈ ವಿಜಯೇಂದ್ರ ತಿರುಗೇಟು

ಚಿತ್ರದುರ್ಗ,ಸೆಪ್ಟಂಬರ್,30,2026 (www.justkannada.in):  ಬಿವೈ ವಿಜಯೇಂದ್ರ ಆರ್ ಟಿಜಿಎಸ್ ಮೂಲಕ ಹಣ ಪಡೆದಿದ್ದಾರೆಂದು...

ಬಾಕಿ ಬಿಲ್​​ ಪಾವತಿ: ಗಡುವು ತಪ್ಪಿದ್ರೆ ಕಮಿಷನ್​​ ದಂಧೆ ದಾಖಲೆ ಬಿಡುಗಡೆ- ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ

ಬೆಂಗಳೂರು, ಸೆಪ್ಟೆಂಬರ್​ ,30,2026 (www.justkannada.in): ಬಾಕಿ ಹಣ ಬಿಡುಗಡೆಗೆ ಕೋರಿ ಸಿಎಂ...

ಪ್ರೀತಿಗೆ ನಿರಾಕರಣೆ: ಪೆಟ್ರೋಲ್ ಸುರಿದು, ಯುವತಿ ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಮೈಸೂರು, ಸೆಪ್ಟಂಬರ್,29, 2026 (www.justkannada.in):  ಪ್ರೀತಿಸುವಂತೆ ನಿರಂತರವಾಗಿ ದುಂಬಾಲು ಬಿದ್ದಿದ್ದ ಯುವಕನೊಬ್ಬ...

ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ- ಸಿಎಂ ಡಿಕೆಶಿಗೆ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು,ಸೆಪ್ಟಂಬರ್,29,2026 (www.justkannada.in): ಆರ್ಥಿಕ ಇಲಾಖೆ ನೀಡಿರುವ ಪತ್ರ ರಾಜ್ಯದ ಹಣಕಾಸು ಪರಿಸ್ಥಿತಿ...