2
October, 2026

A News 365Times Venture

2
Friday
October, 2026

A News 365Times Venture

ಗಣೇಶ ಹಬ್ಬಕ್ಕೆಂದು ಬಂದಿದ್ದ ಯುವಕನ ಬರ್ಬರ ಹತ್ಯೆ

Date:

ಮೈಸೂರು ಅಕ್ಟೋಬರ್‌,1,2026 (www.justkannada.in): ಗಣೇಶ ಹಬ್ಬದ ಸಂಭ್ರಮಕ್ಕೆಂದು ಹಾಸನದಿಂದ ಮೈಸೂರಿಗೆ ಬಂದಿದ್ದ 20 ವರ್ಷದ ಯುವಕನೊಬ್ಬ ಮಧ್ಯರಾತ್ರಿ ನಡೆದ ಗಲಾಟೆಯಲ್ಲಿ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಮೈಸೂರಿನ ಮೆಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾಸನ ಮೂಲದ ಗೌರವ್ (20) ಮೃತ ಯುವಕ ಎಂದು ಗುರುತಿಸಲಾಗಿದೆ. ಹಬ್ಬದ ಪ್ರಯುಕ್ತ ನಿನ್ನೆ ಮೈಸೂರಿಗೆ ಬಂದಿದ್ದ ಗೌರವ್, ಮಧ್ಯರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಮೆಟಗಳ್ಳಿ ವ್ಯಾಪ್ತಿಯಲ್ಲಿ ಸ್ನೇಹಿತರೊಂದಿಗೆ ಇದ್ದ ವೇಳೆ ಸಣ್ಣ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದೆ.

ಇದೇ ವಿಚಾರವನ್ನು ದೊಡ್ಡದಾಗಿ ಮಾಡಿಕೊಂಡ ಆರೋಪಿಗಳಾದ ಅಭಿ, ಅರ್ಜುನ್ ಮತ್ತು ಆತನ ಗ್ಯಾಂಗ್ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗೌರವ್ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ರಕ್ತದ ಮಡುವಿನಲ್ಲಿ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪೊಲೀಸರ ತನಿಖೆ ಚುರುಕು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಮೆಟಗಳ್ಳಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಆರೋಪಿಗಳಾದ ಅಭಿ, ಅರ್ಜುನ್ ಮತ್ತು ಗ್ಯಾಂಗ್ ಗಾಗಿ ತೀವ್ರ ಶೋಧ ನಡೆಸಿದ್ದಾರೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಸ್ಟ್ರಿಕ್ ಜಡ್ಜ್‌ ಕಾರಿಗೆ ಆಟೋ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಮಂಗಳೂರು,ಅಕ್ಟೋಬರ್‌,1,2026 (www.justkannada.in): ದಕ್ಷಿಣ ಕನ್ನಡ ಜಿಲ್ಲಾ 1ನೇ ಹೆಚ್ಚುವರಿ ಜಿಲ್ಲಾ ಮತ್ತು...

MDA ಟಾಸ್ಕ್‌ಫೋರ್ಸ್‌ : ಒಂದು ವರ್ಷಕ್ಕೆ ಬರೋಬ್ಬರಿ ₹16.78 ಲಕ್ಷದ ಗುತ್ತಿಗೆ.!

  ಮೈಸೂರು, ಅ.೦೧,೨೦೨೬: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಕಚೇರಿಯಲ್ಲಿ ಕ್ಷಿಪ್ರಕಾರ್ಯಪಡೆ (Task...

ತುಮಕೂರಿನಲ್ಲಿ 5 ಸಾವಿರ ಕೋಟಿ ರೂ. ಹೂಡಿಕೆಗೆ ರೆನೈಸಾನ್ಸ್ ಆಸಕ್ತಿ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಅಕ್ಟೋಬರ್‌,1,2026 (www.justkannada.in)  2025ರಲ್ಲಿ ನಡೆದಿದ್ದ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಘೋಷಿಸಿದ್ದಂತೆ ಭಾರತ-ಅಮೆರಿಕ...

AIISHನಲ್ಲಿ 2024ರಲ್ಲಿ ಪ್ರಕಟಿಸಿದ್ದ ಬೋಧಕ ಹುದ್ದೆಗಳ ನೇಮಕಾತಿ ಜಾಹೀರಾತು ರದ್ದು

  ಮೈಸೂರು, ಅ.01, 2026: ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ...