ಬೆಂಗಳೂರು, ಅಕ್ಟೋಬರ್, 5,2026 (www.justkannada.in): ರಾಜ್ಯದಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಸಂಬಂಧ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್, ‘ಒಂದು ದಿನಕ್ಕೆ 10 ಫಾರ್ಮ್ ಕೊಡಬಹುದು. ಬಿಎಲ್ಎಗಳು ಒಟ್ಟು 50 ಫಾರ್ಮ್ ಕೊಡಬಹುದು. ಇದಕ್ಕೂ ಮೀರಿ ಫಾರ್ಮ್ ಬಂದರೆ ಇಆರ್ಒ ನಿರ್ಧಾರ ಮಾಡುತ್ತಾರೆ. ಅದಕ್ಕಿಂತ ಹೆಚ್ಚು ಫಾರ್ಮ್ ಕೊಟ್ಟರೇ ಅಥವಾ ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿದರೆ ಕ್ರಮ ಕೈಗೊಳ್ಳಬಹುದು. ಆದರೆ ಫಾರ್ಮ್-7 ಸಂಬಂಧ ಈವರೆಗೆ ಯಾವುದೇ ಕೇಸ್ ದಾಖಲಾಗಿಲ್ಲ, ಮತದಾರರ ಪಟ್ಟಿಯಿಂದ ಕೈಬಿಡಬೇಕೆಂದರೆ ಮೊದಲಿಗೆ ನೋಟಿಸ್ ನೀಡಲಾಗುತ್ತದೆ. ಬಳಿಕ ವಿಚಾರಣೆ ನಡೆಸಿದ ನಂತರ ಪಟ್ಟಿಯಿಂದ ಕೈಬಿಡಲಾಗುವುದು ಎಂದು ತಿಳಿಸಿದರು.
ಅರ್ಹರನ್ನು ಮತ್ತೊಮ್ಮೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇವೆ
ಅರ್ಹರನ್ನು ಮತ್ತೊಮ್ಮೆ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇವೆ. ಈ ಬಗ್ಗೆ ವಿಶೇಷ ಜಾಗೃತಿ ಅಭಿಯಾನ ಮಾಡುತ್ತೇವೆ. ಅರ್ಹ ಮತದಾರರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲ್ಲ. ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಕೆಲಸ ಆರಂಭವಾಗಲಿದೆ. ಫಾರ್ಮ್ ನಂಬರ್ 6ನಲ್ಲಿ ಅಪ್ಲಿಕೇಶನ್ ಹಾಕಬಹುದು’ ಎಂದು ಅನ್ಬುಕುಮಾರ್ ತಿಳಿಸಿದರು.




