ನವದೆಹಲಿ,ಅಕ್ಟೋಬರ್,6,2026 (www.justkannada.in): ಎಸ್ ಐಆರ್ ವಿರುದ್ದ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಿತು.
ದೆಹಲಿಯ ಸಂಸತ್ ಭವನದಿಂದ ಚುನಾವಣಾ ಆಯೋಗದ ಕಚೇರಿಯವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು ಚುನಾವಣಾ ಆಯೋಗ ಕಚೇರಿಗೆ ಯತ್ನಿಸಿದರು. ಈ ವೇಳೆ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆದರು.
ಇದೇ ವೇಳೆ ರಾಹುಲ್ ಗಾಂಧಿ ಬ್ಯಾರಿಕೇಡ್ ಏರಿದ್ದು ನಂತರ ಆಕಾಶವಾಣಿ ಭವನದ ಬಳಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.




