30
April, 2026

A News 365Times Venture

30
Thursday
April, 2026

A News 365Times Venture

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯಿಂದ ನಿಂದನೆ: ಪತಿ ಆತ್ಮಹತ್ಯೆಗೆ ಶರಣು

Date:

ಚಾಮರಾಜನಗರ,ಮಾರ್ಚ್,17,2025 (www.justkannada.in): ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ  ನಿಂದಿಸಿದ್ದಕ್ಕೆ  ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ಪರಶಿವ (32) ಆತ್ಮಹತ್ಯೆ ಮಾಡಿಕೊಂಡ ಪತಿ. ಪತ್ನಿ ಮಮತಾ ಕಿರುಕುಳ ನೀಡುತ್ತಿದ್ದಾಳೆಂದು ಆರೋಪಿಸಿ ಪತಿ ಪರಶಿವ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೀಲ್ಸ್ ಗೀಳಿಗೆ ಬಿದ್ದಿದ್ದ ಪತ್ನಿ ಮಮತಾ ರೀಲ್ಸ್ ಗಾಗಿ ಶೋಕಿ ಜೀವನ ನಡೆಸುತ್ತಿದ್ದು, ಈ ಮಧ್ಯೆ ಗಂಡ ಚೆನ್ನಾಗಿಲ್ಲ ಎಂದು ಕಿರುಕುಳ ನೀಡುತ್ತಿದ್ದಳು. ನೀನು ಚೆನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಅಂತಾ ಎಲ್ಲರೆದುರು ಮಮತಾ ಅವಮಾನ ಮಾಡುತ್ತಿದ್ದಳು ಎನ್ನಲಾಗಿದೆ.

ಅಲ್ಲದೆ ದಿನನಿತ್ಯ ಬ್ರಾಂಡೆಡ್ ಬಟ್ಟೆ, ಅಭರಣ ಕೊಡಿಸುವಂತೆ, ಬೇರೆ ಮನೆ ಮಾಡುವಂತೆ ಪತಿ ಪರಶಿವಗೆ ಮಮತಾ ಪೀಡಿಸುತ್ತಿದ್ದಳು. ಕೊಡಿಸಲ್ಲ, ನನ್ನ ಬಳಿ ಹಣ ಇಲ್ಲ  ಎಂದಿದ್ದ ಪತಿ ಮೇಲೆ ಮಮತಾ ಸುಳ್ಳು ವರದಕ್ಷಿಣೆ ಕೇಸ್ ಹಾಕುವ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಇದರಿಂದ  ಬೇಸತ್ತ ಪತಿ ಪರಶಿವ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Abuse, wife, no hair, head, husband, suicide

The post ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯಿಂದ ನಿಂದನೆ: ಪತಿ ಆತ್ಮಹತ್ಯೆಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...