5
March, 2026

A News 365Times Venture

5
Thursday
March, 2026

A News 365Times Venture

ಸಿಎಂ ತವರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೊಬ್ಬ ಬಲಿ

Date:

ಮೈಸೂರು,ಮಾರ್ಚ್,31,2025 (www.justkannada.in): ಅಕ್ರಮ ಮದ್ಯ ಸೇವಿಸಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿರುವ ಘಟನೆ ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ನಾಗಣಪುರ ಆದಿವಾಸಿ ಕಾಲೋನಿಯ ರಾಜು (54) ಮೃತ ವ್ಯಕ್ತಿ. ಪೆಟ್ಟಿ ಮತ್ತು ಗಿರಣಿ ಅಂಗಡಿಗಳಲ್ಲಿ  ಸಿಗುವ ಅಕ್ರಮ ಮದ್ಯ ಸೇವಿಸಿ ರಾಜು ಸಾವನ್ನಪ್ಪಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ  ಸ್ಥಳದಲ್ಲಿಯೇ ರಾಜು ಮೃತಪಟ್ಟಿದ್ದಾರೆ.

ಕಳೆದ 20 ದಿನಗಳ ಹಿಂದೆ ಈರೇಗೌಡನ ಹುಂಡಿ ಗ್ರಾಮದ ಚೆನ್ನಪ್ಪ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದರು. ಹದಿನೈದು ದಿನದ ಹಿಂದೆ ಬಳ್ಳೂರ ಹುಂಡಿ ಗ್ರಾಮದ ಮಹದೇವ ಬಲಿಯಾಗಿದ್ದರು. ಇದೀಗ ಅಕ್ರಮ ಮದ್ಯ ಸೇವಿಸಿ ಮೂರನೇ ವ್ಯಕ್ತಿ ಸಾವನ್ನಪ್ಪಿದ್ದಾರೆ.

ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಅಬಕಾರಿ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ‌ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಸೂಕ್ತ‌ ಕ್ರಮ ಜರುಗಿಸದೆ‌ ಅಧಿಕಾರಿಗಳು ಹಿಂದಿರುಗಿದ್ದರು. ಇದೀಗ ಅಕ್ರಮ ಮದ್ಯ ಸೇವನೆಗೆ ಮತ್ತೊಂದು ಬಲಿಯಾಗಿದೆ ಎಂದು ಅಬಕಾರಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.

Key words: Another, death, consuming, illicit liquor, mysore

The post ಸಿಎಂ ತವರು ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೊಬ್ಬ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...